ವಿಶೇಷ ಘೋಷಣೆ ಮಾಡಿದ ಅನುಷ್ಕಾ ಶೆಟ್ಟಿ: ಮಹಿಳೆಯರಿಗಾಗಿ ವಿಶೇಷ ಶೋ

pli mix
Published on

ನಟಿ ಅನುಷ್ಕಾ ಶೆಟ್ಟಿ ನಟನೆಯ 'ಮಿಸ್ ಶೆಟ್ಟಿ, ಮಿಸ್ಟರ್ ಪೋಲಿಶೆಟ್ಟಿ' ಸಿನಿಮಾ ಕಳೆದ ವಾರ ಬಿಡುಗಡೆ ಆಗಿ ಉತ್ತಮ ಪ್ರದರ್ಶನ ಕಾಣುತ್ತಿದೆ. ಈ ನಡುವೆ ಅನುಷ್ಕಾ ಶೆಟ್ಟಿ, ಮಹಿಳೆಯರಿಗಾಗಿ ಆಂಧ್ರ-ತೆಲಂಗಾಣದಲ್ಲಿ ವಿಶೇಷ ಶೋಗಳನ್ನು ಆಯೋಜನೆ ಮಾಡಿದ್ದಾರೆ.


ಅನುಷ್ಕಾ ಶೆಟ್ಟಿ ಕಳೆದ ಕೆಲವು ವರ್ಷಗಳಿಂದ ಸಿನಿಮಾಗಳಿಂದ ದೂರ ಉಳಿದಿದ್ದು, ಆದರೆ ಇದೀಗ ‘ಮಿಸ್ ಶೆಟ್ಟಿ ಆಂಡ್ ಮಿಸ್ಟರ್ ಪೋಲಿಶೆಟ್ಟಿ’ ಸಿನಿಮಾದಿಂದ ಮತ್ತೆ ಚಿತ್ರರಂಗಕ್ಕೆ ಮರಳಿದ್ದಾರೆ. ಕಳೆದ ವಾರ ಬಿಡುಗಡೆ ಆಗಿರುವ ‘ಮಿಸ್ ಶೆಟ್ಟಿ, ಮಿಸ್ಟರ್ ಪೋಲಿಶೆಟ್ಟಿ‘ ಸಿನಿಮಾ ಬಿಡುಗಡೆ ಆಗಿದ್ದು ಸಿನಿಮಾಕ್ಕೆ ಉತ್ತಮ ಪ್ರತಿಕ್ರಿಯೆ ದೊರೆತಿದೆ. ಸಿನಿಮಾ ಹಿಟ್ ಆಗಿರುವ ಬೆನ್ನಲ್ಲೆ ನಟಿ ಅನುಷ್ಕಾ ಶೆಟ್ಟಿ ಹೊಸದೊಂದು ಘೋಷಣೆ ಮಾಡಿದ್ದಾರೆ.


ಸೋಶಿಯಲ್​ ಮೀಡಿಯಾದಲ್ಲಿ ವಿಡಿಯೋ ಅಪ್​ಲೋಡ್ ಮಾಡಿರುವ ನಟಿ ಅನುಷ್ಕಾ ಶೆಟ್ಟಿ, ”ಎಲ್ಲರಿಗೂ ನಮಸ್ತೆ, ನಮ್ಮ ‘ಮಿಸ್ ಶೆಟ್ಟಿ, ಮಿಸ್ಟರ್ ಪೋಲಿಶೆಟ್ಟಿ’ ಸಿನಿಮಾವನ್ನು ಇಷ್ಟು ಆದರದಿಂದ ಸ್ವೀಕರಿಸಿದ್ದಕ್ಕೆ ಎಲ್ಲರಿಗೂ ಧನ್ಯವಾದ. ನಿಮ್ಮ ಮೆಜೇಸ್, ಟ್ವೀಟ್ಸ್ ನೋಡುತ್ತಿದ್ದರೆ ಬಹಳ ಖುಷಿಯಾಗುತ್ತದೆ.

ಈ ಗುರುವಾರ ಆಂಧ್ರ ಪ್ರದೇಶ ಹಾಗೂ ತೆಲಂಗಾಣದ ಕೆಲವು ಭಾಗಗಳಲ್ಲಿ ಒಂದು ಸ್ಪೆಷಲ್ ಶೋ ಅನ್ನು ಕೇವಲ ಮಹಿಳೆಯರಿಗಾಗಿ ಆಯೋಜನೆ ಮಾಡುತ್ತಿದ್ದೇವೆ. ನಿಮ್ಮ ಮನೆಯಲ್ಲಿರುವ ಚಿಕ್ಕವರು, ದೊಡ್ಡವರನ್ನು ಕರೆದುಕೊಂಡು ಹೋಗಿ. ನಿಮ್ಮ ಪ್ರತಿಕ್ರಿಯೆಗಾಗಿ ಕಾಯುತ್ತಿರುತ್ತೇನೆ. ನಮ್ಮ ‘ಮಿಸ್ ಶೆಟ್ಟಿ, ಮಿಸ್ಟರ್ ಪೋಲಿಶೆಟ್ಟಿ’ ಸಿನಿಮಾ ತಂಡದಿಂದ ಎಲ್ಲರಿಗೂ ಧನ್ಯವಾದ” ಎಂದಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net