ಟೆಲ್ ಅವೀವ್ ವಿಮಾನ ನಿಲ್ದಾಣದ ಮೇಲೆ ಕ್ಷಿಪಣಿ ದಾಳಿ: ಅಬುಧಾಬಿ ಕಡೆಗೆ ತಿರುಗಿದ ಏರ್ ಇಂಡಿಯಾ ವಿಮಾನ| Air india

air india
Published on

Israel | ಇಸ್ರೇಲ್ ನಗರದ ವಿಮಾನ ನಿಲ್ದಾಣದ ಬಳಿ ಕ್ಷಿಪಣಿ ದಾಳಿ ನಡೆಸಿದ ಪರಿಣಾಮ, ರಾಷ್ಟ್ರ ರಾಜಧಾನಿಯಿಂದ ಟೆಲ್ ಅವೀವ್‌ಗೆ ಹೋಗುತ್ತಿದ್ದ ಏರ್ ಇಂಡಿಯಾ ವಿಮಾನವನ್ನು ಭಾನುವಾರ (4) ಅಬುಧಾಬಿ ಕಡೆಗೆ ತಿರುಗಿಸಲಾಯಿತು ಎಂದು ಮೂಲಗಳು ತಿಳಿಸಿವೆ. ಬೋಯಿಂಗ್ 787 ವಿಮಾನದೊಂದಿಗೆ ಕಾರ್ಯನಿರ್ವಹಿಸುತ್ತಿದ್ದ ಏರ್ ಇಂಡಿಯಾ ವಿಮಾನ AI139 ಟೆಲ್ ಅವೀವ್‌ನಲ್ಲಿ ಇಳಿಯುವ ಒಂದು ಗಂಟೆಗೂ ಮೊದಲು ಈ ದಾಳಿ ನಡೆದಿದೆ ಎನ್ನಲಾಗಿದೆ.

ಟೆಲ್ ಅವಿವ್​ನಿಂದ ದೆಹಲಿಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ರದ್ದಾಗಿದೆ. ಯೆಮನ್​ನಿಂದ ಹಾರಿಸಲಾದ ಕ್ಷಿಪಣಿ, ಟೆಲ್ ಅವಿವ್ ವಿಮಾನ ನಿಲ್ದಾಣದ ಬಳಿ ಬಿದ್ದ ನಂತರ ಟೆಲ್ ಅವಿವ್ ವಿಮಾನ ನಿಲ್ದಾಣಕ್ಕೆ ವಿಮಾನ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಇಸ್ರೇಲಿ ಪೊಲೀಸರು ತಿಳಿಸಿದ್ದಾರೆ.

ಪ್ಯಾಲೆಸ್ತೇನಿಯನ್​ರೊಂದಿಗೆ ಗಾಜಾದಲ್ಲಿ ಇಸ್ರೇಲ್ ಮೇಲೆ ದಾಳಿ ನಡೆಸುತ್ತಿರುವ ಹೌತಿ ಬಂಡುಕೋರರು, ವಿಮಾನ ನಿಲ್ದಾಣದಲ್ಲಿ ಹೈಪರ್‌ಸಾನಿಕ್ ಬ್ಯಾಲಿಸ್ಟಿಕ್ ಕ್ಷಿಪಣಿಯನ್ನು ಹಾರಿಸಿದ್ದಾರೆ ಎಂದು ಹೇಳಲಾಗಿದೆ.

(ಏಜೆನ್ಸೀಸ್)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net