ಮಂಗಳೂರು: ಕರಾವಳಿಯಲ್ಲಿ ಶುಕ್ರವಾರ ದಿನಪೂರ್ತಿ ಮೋಡ ಸಹಿತ ಬಿಸಿಲು ಹೊಂದಿದ ಮಿಶ್ರ ವಾತಾವರಣ ಕಂಡುಬಂದಿದೆ.
ದ.ಕ. ಜಿಲ್ಲೆಯಲ್ಲಿ ಗುರುವಾರ ನಸುಕಿನ ಜಾವದಿಂದಲೇ ಮೊಡಕವಿದಿತ್ತು. ಬೆಳಗ್ಗೆ ಸ್ವಲ್ಪ ಹೊತ್ತು ಮಳೆ ಹೊರತುಪಡಿಸಿದರೆ ಇಡೀ ದಿನ ಮಳೆ ರಹಿತ ಮಿಶ್ರ ವಾತಾವರಣ ಕಂಡುಬಂದಿದೆ. ದ.ಕ ಜಿಲ್ಲೆಯಲ್ಲಿ ಗುರುವಾರ ಬೆಳಗ್ಗಿನ ಮಾಹಿತಿಯಂತೆ ಕಳೆದ 24 ಗಂಟೆಗಳಲ್ಲಿ 11.2ಮಿಮಿ ಮಳೆ ದಾಖಲಾಗಿತ್ತು. ಕಾಸರಗೋಡು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಬಿಸಿಲು, ಮೋಡ ಹಾಗೂ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ದಿನದಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಕರಾವಳಿ ತೀರ ಭಾಗಗಳಲ್ಲಿ ಅಲ್ಲಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಆಗಸ್ಟ್ 25ರಂದು ಬಂಗಾಳಕೊಲ್ಲಿಯ ಒಡಿಸ್ಸಾ ಕರಾವಳಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿರುವುದರಿಂದ ಕರಾವಳಿ ಬಾಗದಲ್ಲಿ ತಿಂಗಳಾಂತ್ಯದಲ್ಲಿ ಮಳೆಯ ಪ್ರಮಾಣ ಇರುವ ಸಾಧ್ಯತೆಗಳಿವೆ .ನಂತರ ಬಿಸಿಲಿನ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.