ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಎಂ.ಕೆ. ಸ್ಟಾಲಿನ್​

MK Stalin
Published on

ಚೆನ್ನೈ: ತಮಿಳುನಾಡು ನೂತನ ಮುಖ್ಯಮಂತ್ರಿಯಾಗಿ ಡಿಎಂಕೆ ಮುಖ್ಯಸ್ಥ ಎಂ.ಕೆ. ಸ್ಟಾಲಿನ್ ಅವರು ಶುಕ್ರವಾರ ಬೆಳಗ್ಗೆ ಚೆನ್ನೈನ ರಾಜಭವನದಲ್ಲಿ ರಾಜ್ಯಪಾಲ ಬನ್ವರಿಲಾಲ್​ ಪುರೋಹಿತ್​ರಿಂದ ಪ್ರಮಾಣವಚನ ಸ್ವೀಕರಿಸಿದರು.

ಇದೇ ವೇಳೆ ಸಚಿವ ಸಂಪುಟದ 34 ಸದಸ್ಯರು ಸಹ ಸ್ಟಾಲಿನ್​ ಜತೆಯಲ್ಲಿಯೇ ಪ್ರಮಾಣ ವಚನವನ್ನು ಸ್ವೀಕರಿಸಿದರು. ಕೆರೊನಾ ಬಿಕ್ಕಟ್ಟು ಹಿನ್ನೆಲೆಯಲ್ಲಿ ಪ್ರಮಾಣ ವಚನ ಸಮಾರಂಭ ಸರಳವಾಗಿ ಕೆಲವೇ ಗಣ್ಯರ ಸಮ್ಮುಖದಲ್ಲಿ ನಡೆಯಿತು.

ಏಪ್ರಿಲ್​ 26ರಂದು ನಡೆದ ವಿಧಾನಸಭಾ ಚುನಾವಣೆಯ ಫಲಿತಾಂಶ ಮೇ 2ರಂದು ಹೊರಬಿತ್ತು. ಒಟ್ಟು 234 ಸ್ಥಾನಗಳಲ್ಲಿ 159 ಸ್ಥಾನಗಳನ್ನು ಗೆಲ್ಲುವ ಮೂಲಕ ಡಿಎಂಕೆ ಅಧಿಕಾರದ ಗದ್ದುಗೆ ಏರಿದೆ.

ಈ ಹಿಂದಿನ ಸರ್ಕಾರವನ್ನು ಮುನ್ನೆಡೆಸುತ್ತಿದ್ದ ಎಐಎಡಿಎಂಕೆ ಕೇವಲ 75 ಸ್ಥಾನಗಳಿಗೆ ಮಾತ್ರ ತೃಪ್ತಿಪಟ್ಟುಕೊಂಡಿದೆ. (ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net