ಶಾಸಕರಿಗೆ ಸಿಹಿ ಸುದ್ದಿ ಕೊಟ್ಟ ಸಿಎಂ ಯಡಿಯೂರಪ್ಪ

yediyurappa
yediyurappa
Published on

ಬೆಂಗಳೂರು: ಶಾಸಕರ ಪ್ರದೇಶಾಭಿವೃದ್ಧಿ ನಿಧಿಗೆ ಬಾಕಿ ಹಣ ಬಿಡುಗಡೆ ಮಾಡಲು ಕ್ರಮ ವಹಿಸುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಹಣಕಾಸು ಇಲಾಖೆಗೆ ಸೂಚನೆ ನೀಡಿದ್ದಾರೆ.

ಕೋವಿಡ್ ಸಂದರ್ಭದಲ್ಲಿ ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಲ್ಲಿ ಶೇ.30 ಹಣವನ್ನು ಕಡಿತ ಮಾಡಲಾಗಿತ್ತು.

ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸ ಮಾಡುವುದು ಕಷ್ಟವಾಗಿದೆ. ಕಾಮಗಾರಿಗಳ ಬಾಕಿ ಬಿಲ್ ಕೂಡ ಪಾವತಿಯಾಗಿಲ್ಲ. ಆದ್ದರಿಂದ ಕೂಡಲೇ ಹಣ ಬಿಡುಗಡೆ ಮಾಡುವಂತೆ ಶಾಸಕರು ಮುಖ್ಯಮಂತ್ರಿ ಮೇಲೆ ಒತ್ತಡ ಹೇರಿದ್ದರು. ಈ ನಿಟ್ಟಿನಲ್ಲಿ ತಕ್ಷಣ ಕ್ರಮ ವಹಿಸಿರುವ ಸಿಎಂ ಈ ಸೂಚನೆ ನೀಡಿದ್ದಾರೆ ಎಂದು ಮೂಲಗಳು ವಿಜಯವಾಣಿಗೆ ತಿಳಿಸಿವೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net