ಚೆಕ್‌ಬೌನ್ಸ್ ಕೇಸಿನಲ್ಲಿ ಶಾಸಕ ಬಿ. ನಾಗೇಂದ್ರಗೆ ಶಿಕ್ಷೆ

nagrdera
Published on

ಬೆಂಗಳೂರು: ಚೆಕ್ ಬೌನ್ಸ್ ಪ್ರಕರಣದಲ್ಲಿ ಶಾಸಕ ಬಿ. ನಾಗೇಂದ್ರ ಅವರಿಗೆ ಶಿಕ್ಷೆ ವಿಧಿಸಿ ಕೋರ್ಟ್ ತೀರ್ಪು ನೀಡಿದೆ.

ರಾಜ್ಯ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ಹಣ ವರ್ಗಾವಣೆ ಕೇಸ್ ಜತೆಗೆ ಬಿ.ನಾಗೇಂದ್ರಗೆ ಚೆಕ್‌ಬೌನ್ಸ್ ಪ್ರಕರಣ ಸಹ ಸಂಕಷ್ಟಕ್ಕೆ ಸಿಲುಕಿಸಿದೆ.

ಚೆಕ್ ಬೌನ್ಸ್ ಪ್ರಕರಣದಲ್ಲಿ ಬಿ. ನಾಗೇಂದ್ರ ಸೇರಿದಂತೆ ಮೂವರು ಆರೋಪಿಗಳು 1.25 ಕೋಟಿ ರೂ. ದಂಡ ಪಾವತಿಸುವಂತೆ ನ್ಯಾಯಾಲಯ ಆದೇಶಿಸಿದೆ. ದಂಡ ಪಾವತಿಸದಿದ್ದರೆ 1 ವರ್ಷ ಜೈಲು ವಾಸ ಅನುಭವಿಸಬೇಕೆಂದು 42ನೇ ಎಸಿಜೆಎಂ ನ್ಯಾಯಾಧೀಶರಾದ ಕೆ.ಎನ್.ಶಿವಕುಮಾರ್ ಆದೇಶ ಹೊರಡಿಸಿದ್ದಾರೆ.

ದೂರುದಾರ ವಿಎಸ್‌ಎಲ್ ಸ್ಟೀಲ್ಸ್ ಲಿಮಿಟೆಡ್ ಹಾಗೂ ಬಿ.ನಾಗೇಂದ್ರ ಹಾಗೂ ಅನಿಲ್ ರಾಜಶೇಖರ್ ಚುಂಡೂರು ಭಾಸ್ಕರ್ ಪಾಲುದಾರಿಕೆಯ ಬಿ.ಸಿ. ಇನ್ಫ್ರಾಸ್ಟ್ರಕ್ಚರ್ ಆ್ಯಂಡ್ ರಿಸೋರ್ಸ್ ಕಂಪನಿ ನಡುವೆ 2013ರಿಂದ ಹಣಕಾಸು ವಿವಾದವಿತ್ತು. ವಿಎಸ್‌ಎಲ್ ಕಂಪನಿ ಪರವಾಗಿ ಕೋರ್ಟ್ ಆದೇಶಿಸಿದೆ. ಬಿ. ನಾಗೇಂದ್ರ ಪಾಲುದಾರಿಕೆಯ ಕಂಪನಿ 2 ಕೋಟಿ 53 ಲಕ್ಷ ಪಾವತಿಸಬೇಕಿತ್ತು. ಇದರ ಭಾಗವಾಗಿ 1 ಕೋಟಿ ರೂ. ಚೆಕ್ ಅನ್ನು ನೀಡಲಾಗಿತ್ತು. ಈ ಚೆಕ್ ಬೌನ್ಸ್ ಆಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net