ಒಕ್ಕಲಿಗರ ಸಂಘದ ಅಧ್ಯಕ್ಷರಾಗಿ ಶಾಸಕ ಸಿ.ಎನ್. ಬಾಲಕೃಷ್ಣ ಪುನರಾಯ್ಕೆ!

umapathi
Published on

ಬೆಂಗಳೂರು: ರಾಜ್ಯ ಒಕ್ಕಲಿಗರ ಸಂಘದ ನೂತನ ಅಧ್ಯಕ್ಷ, ಪ್ರಧಾನ ಕಾರ್ಯದರ್ಶಿ ಸೇರಿದಂತೆ ವಿವಿಧ ಸ್ಥಾನಗಳಗೆ ಇಂದು (ಜುಲೈ.4ರ) ನಡೆದಿದ್ದ ಚುನಾವಣೆ ಫಲಿತಾಂಶ ಪ್ರಕಟವಾಗಿದೆ. ರಾಜ್ಯ ಒಕ್ಕಲಿಗ ಸಂಘದ ಅಧ್ಯಕ್ಷರಾಗಿ ಸಿ.ಎನ್​ ಬಾಲಕೃಷ್ಣ ಅವಿರೋಧವಾಗಿ ಪುನರಾಯ್ಕೆಯಾಗಿದ್ದಾರೆ.

ಇಂದು ನಡೆದ ಪದಾಧಿಕಾರಿಗಳ ಚುನಾವಣೆಯಲ್ಲಿ ಉಪಾಧ್ಯಕ್ಷರಾಗಿ ಡಾ. ಆರ್.ಪ್ರಕಾಶ್​, ರಾಘವೇಂದ್ರ ಆಯ್ಕೆ ಮಾಡಲಾಗಿದೆ. ಪ್ರಧಾನ ಕಾರ್ಯದರ್ಶಿಯಾಗಿ ಸಿ.ದೇವರಾಜ್​, ಸಹಾಯಕ ಕಾರ್ಯದರ್ಶಿಯಾಗಿ ಆರ್.ಹನುಮಂತರಾಯಪ್ಪ, ಖಜಾಂಚಿ ಆಗಿ ಎಂ.ಎಸ್​. ಉಮಾಪತಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷರು, ಉಪಾಧ್ಯಕ್ಷರುಗಳು, ಪ್ರಧಾನ ಕಾರ್ಯದರ್ಶಿ, ಸಹಾಯಕ ಕಾರ್ಯದರ್ಶಿ, ಮತ್ತು ಖಜಾಂಚಿ ಸ್ಥಾನಗಳಿಗೆ ನಡೆದ ಚುನಾವಣೆಗೆ ಯಾರು ನಾಮಪತ್ರ ಸಲ್ಲಿಸಿರುವುದರಿಂದ ಈ ಕೆಳಕಂಡ ಸ್ಥಾನಗಳಿಗೆ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net