ಕ್ರಿಕೆಟ್ ಪಂದ್ಯಾವಳಿಗೆ ಶಾಸಕರಿಂದ ಚಾಲನೆ

cricket
ಶಿವಮೊಗ್ಗ ಕೃಷಿ ಕಾಲೇಜು ಕ್ರೀಡಾಂಗಣದಲ್ಲಿ ನಗರ ಪಾಲಿಕೆ ನೌಕರರ ಸಂಘದಿಂದ ಆಯೋಜಿಸಿದ್ದ ಕ್ರಿಕೆಟ್ ಪಂದ್ಯಾವಳಿಗೆ ಶಾಸಕ ಎಸ್.ಎನ್.ಚನ್ನಬಸಪ್ಪ ಚಾಲನೆ ನೀಡಿ ಆಟಗಾರರಿಗೆ ಶುಭ ಕೋರಿದರು.
Published on

ಶಿವಮೊಗ್ಗ: ನಗರದ ಕೃಷಿ ಕಾಲೇಜು ಕ್ರೀಡಾಂಗಣದಲ್ಲಿ ನಗರ ಪಾಲಿಕೆ ನೌಕರರ ಸಂಘದಿಂದ ಪೌರ ಕಾರ್ಮಿಕರ ದಿನಾಚರಣೆ ಅಂಗವಾಗಿ ಶನಿವಾರದಿಂದ ಎರಡು ದಿನಗಳ ಕ್ರಿಕೆಟ್ ಪಂದ್ಯಾವಳಿ ಆಯೋಜಿಸಲಾಗಿದ್ದು ಶಾಸಕ ಎಸ್.ಎನ್.ಚನ್ನಬಸಪ್ಪ ಪಂದ್ಯಾವಳಿ ಉದ್ಘಾಟಿಸಿ ಆಟಗಾರರಿಗೆ ಶುಭ ಕೋರಿದರು.

ಪಂದ್ಯಾವಳಿಯಲ್ಲಿ ನಗರ ನೀರು ಸರಬರಾಜು ಮಂಡಳಿಯ ಕಾರ್ಮಿಕರು, ಲೋಡರ್ಸ್, ಅನ್‌ಲೋಡರ್ಸ್, ಸ್ವಚ್ಛತಾ ಕಾರ್ಮಿಕರು ಮತ್ತು ಆಡಳಿತ ಸಿಬ್ಬಂದಿ ಸೇರಿದಂತೆ ಒಟ್ಟು 8 ತಂಡಗಳು ಭಾಗವಹಿಸಿದ್ದವು. ತಲಾ ಆರು ಓವರ್‌ನ ಪಂದ್ಯಾವಳಿಯಲ್ಲಿ ಕ್ರೀಡಾಪಟುಗಳು ಸಂಭ್ರಮದಿಂದ ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಚನ್ನಬಸಪ್ಪ, ಪೌರ ಕಾರ್ಮಿಕರು ಸಂಭ್ರಮದಿಂದ ಈ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದಾರೆ. ಪ್ರತಿನಿತ್ಯ ಒತ್ತಡದ ನಡುವೆಯೂ ಕೆಲಸ ನಿರ್ವಹಿಸುವ ಕಾರ್ಮಿಕರಿಗೆ ಪೌರ ಕಾರ್ಮಿಕ ದಿನಾಚರಣೆ ಸಂದರ್ಭದಲ್ಲಿ ಕ್ರೀಡಾಕೂಟದಲ್ಲಿ ಭಾಗವಹಿಸುವ ಅವಕಾಶ ಸಿಕ್ಕಿರುವುದು ಸಂತಸ ತಂದಿದೆ ಎಂದರು.

ಕೃಷಿ ಮಹಾವಿದ್ಯಾಲಯದ ಡೀನ್ ಡಾ.ತಿಪ್ಪೇಶ್, ನಗರ ಪಾಲಿಕೆ ನೌಕರರ ಸಂಘದ ಅಧ್ಯಕ್ಷ ಎನ್.ಗೋವಿಂದ, ಪಾಲಿಕೆ ಅಧಿಕಾರಿ ಅನುಪಮಾ ಮುಂತಾದವರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net