ವಿಶೇಷ ದೀಪಾಲಂಕಾರಕ್ಕೆ ಶಾಸಕ ಚಾಲನೆ

15M.D.R.6
ಮದ್ದೂರು ಪಟ್ಟಣದ ಪುರಾಣ ಪ್ರಸಿದ್ಧ ಶ್ರೀ ಮದ್ದೂರಮ್ಮನ ಹಬ್ಬದ ಅಂಗವಾಗಿ ಪುರಸಭೆಯ ವತಿಯಿಂದ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಅಳವಡಿಸಿರುವ ದೀಪಾಲಂಕಾರಕ್ಕೆ ಶಾಸಕ ಕೆ.ಎಂ.ಉದಯ್ ಚಾಲನೆ ನೀಡಿದರು. ಕೋಕಿಲಾ ಅರುಣ್, ಪ್ರಸನ್ನಕುಮಾರ್, ವನಿತಾ, ಸರ್ವಮಂಗಳ, ಪ್ರಮೀಳ, ಬಸವರಾಜು, ವೆಂಕಟೇಶ್ ಇದ್ದರು.
Published on

ಮದ್ದೂರು: ಪಟ್ಟಣದ ಪುರಾಣ ಪ್ರಸಿದ್ಧ ಶ್ರೀ ಮದ್ದೂರಮ್ಮನ ಹಬ್ಬದ ಅಂಗವಾಗಿ ಪುರಸಭೆಯ ವತಿಯಿಂದ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಅಳವಡಿಸಿರುವ ದೀಪಾಲಂಕಾರಕ್ಕೆ ಶಾಸಕ ಕೆ.ಎಂ.ಉದಯ್ ಸೋಮವಾರ ಚಾಲನೆ ನೀಡಿದರು.

ಶ್ರೀ ಮದ್ದೂರಮ್ಮ ಜಾತ್ರಾ ಮಹೋತ್ಸವಕ್ಕೆ ತನ್ನದೆಯಾದ ಹಲವಾರು ವರ್ಷಗಳಿ ಇತಿಹಾಸವಿದೆ. ಜಾತ್ರಾ ಮಹೋತ್ಸವಕ್ಕೆ ಜಿಲ್ಲೆ ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸುತ್ತಾರೆ. ಈ ಹಿನ್ನೆಲೆಯಲ್ಲಿ ಜಾತ್ರಾ ಮಹೋತ್ಸವಕ್ಕೆ ತಾಲೂಕು ಆಡಳಿತ ಮತ್ತು ಪುರಸಭೆ ವತಿಯಿಂದ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದರು.

ಇದೇ ಪ್ರಪ್ರಥಮವಾಗಿ ಪಟ್ಟಣ ಪ್ರಮುಖ ಬೀದಿಗಳಲ್ಲಿ ವಿದ್ಯತ್ ದೀಪಾಂಲಕಾರ ಮಾಡಿರುವುದು ಹಬ್ಬದ ಸಂಭ್ರವನ್ನು ಮತ್ತಷ್ಟು ಹೆಚ್ಚಿಸಿದೆ ಎಂದರು. ತಾಯಿ ಮದ್ದೂರಮ್ಮ ಎಲ್ಲರಿಗೂ ಒಳ್ಳೆಯದನ್ನು ಮಾಡಲಿ ಎಂದರು.

ಪುರಸಭಾ ಅಧ್ಯಕ್ಷೆ ಕೋಕಿಲಾ ಅರುಣ್, ಉಪಾಧ್ಯಕ್ಷ ಟಿ.ಆರ್.ಪ್ರಸನ್ನಕುಮಾರ್, ಸ್ಥಾಯಿ ಸಮಿತಿ ಅಧ್ಯಕ್ಷೆ ವನಿತಾ, ಸದಸ್ಯರಾದ ಸರ್ವಮಂಗಳಾ, ಪ್ರಮೀಳಾ, ಬಸವರಾಜು, ವೆಂಕಟೇಶ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net