ಸಭೆ ನಡೆಸುತ್ತಿದ್ದ ವೇಳೆ ಏಕಾಏಕಿ ತೀವ್ರ ಅಸ್ವಸ್ಥಗೊಂಡು ಕುಸಿದ ಸುಳ್ಯ ಶಾಸಕ ಅಂಗಾರ; ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲು

Angara 27 March 20
Published on

ಕಡಬ: ಇಂದು ಬೆಳಗ್ಗೆ ಸಭೆಯೊಂದರಲ್ಲಿ ಪಾಲ್ಗೊಂಡಿದ್ದ ಸುಳ್ಯ ಶಾಸಕ ಎಸ್​.ಅಂಗಾರ ಅವರು ತೀವ್ರ ಅಸ್ವಸ್ಥಗೊಂಡಿದ್ದು, ಅವರನ್ನು ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕೊರೊನಾ ಮುನ್ನೆಚ್ಚರಿಕಾ ಕ್ರಮದ ಹಿನ್ನೆಲೆಯಲ್ಲಿ ಕಡಬ ಅನುಗ್ರಹ ಸಭಾಭವನದಲ್ಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಸಭೆ ನಡೆಸಿದ್ದ ಶಾಸಕರು, ಬಳಿಕ ಕಡಬ ಪ್ರಾಥಮಿಕ‌ ಕೃಷಿ ಪತ್ತಿನ ಸಹಕಾರಿ ಸಂಘದ ಸಭಾಂಗಣದಲ್ಲಿ ಪಡಿತರ ವಿತರಣಾ ವ್ಯವಸ್ಥೆಯ ಕುರಿತು ಅಧಿಕಾರಿಗಳೊಂದಿಗೆ ಸಭೆ ಮಾಡುತ್ತಿದ್ದ ವೇಳೆ ದಿಢೀರ್​ ಅಸ್ವಸ್ಥಗೊಂಡರು.

ವೈದ್ಯರನ್ನು ಸ್ಥಳಕ್ಕೆ ಕರೆಸಿ ಪರೀಕ್ಷೆ ಮಾಡಿಸಲಾಯಿತು. ಸಮೀಪದ ಜನೌಷಧಿ ಕೇಂದ್ರದಲ್ಲಿ ಇಸಿಜಿ ತಪಾಸಣೆಯನ್ನೂ ಮಾಡಲಾಯಿತು. ಶಾಸಕರಿಗೆ ರಕ್ತದ ಒತ್ತಡ ತೀವ್ರವಾಗಿ ಕಡಿಯಾಗಿರುವ ಕಾರಣ ಅವರನ್ನು ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. 

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net