ಮುಡಾ ಅಕ್ರಮ ಸಂಬಂಧ ಅಧಿಕಾರಿಗಳ ವಿರುದ್ಧ ಶಾಸಕ ಟಿ.ಎಸ್. ಶ್ರೀವತ್ಸ ದೂರು

ವಿಜಯವಾಣಿ (84)
Published on

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ಕಂಡು ಬಂದಿರುವ ಅಕ್ರಮಗಳಲ್ಲಿ ಭಾಗಿಯಾಗಿರುವಂತಹ ಅಧಿಕಾರಿಗಳನ್ನು ತನಿಖೆಗೆ ಒಳಪಡಿಸಿ ಶಿಸ್ತು ಕ್ರಮ ಕೈಗೊಳ್ಳುವಂತೆ ಇದೀಗ ಶಾಸಕ ಟಿ.ಎಸ್. ಶ್ರೀವತ್ಸ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.

"ಮುಡಾದಲ್ಲಿನ ಅಕ್ರಮದಿಂದಾಗಿ ಸರ್ಕಾರದ ಬೊಕ್ಕಸಕ್ಕೆ 5 ಸಾವಿರ ಕೋಟಿ ರೂ.ಗಳಿಗೂ ಹೆಚ್ಚಿನ ನಷ್ಟವಾಗಿರುವ ಆರೋಪವಿದೆ. ಈ ಬಗ್ಗೆ ಕಳೆದ ಎರಡು ತಿಂಗಳಿಂದ ಎಲ್ಲ ಮಾಧ್ಯಮಗಳನ್ನೂ ಚರ್ಚೆಯಾಗುತ್ತಿದೆ. ಹಗರಣದಲ್ಲಿ ಸಂಬಂಧ ಈ ಹಿಂದಿನ ಆಯುಕ್ತರಾದ ಡಿ.ಬಿ. ನಟೇಶ್ ಹಾಗೂ ಜಿ.ಟಿ. ದಿನೇಶ್ ಕುಮಾರ್ ವಿರುದ್ಧ ತನಿಖೆ ಕೈಗೊಂಡು ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು" ಎಂದಿದ್ದಾರೆ.

"ಇದರೊಟ್ಟಿಗೆ ಹಗರಣದಲ್ಲಿ ಭಾಗಿಯಾದ ಎಲ್ಲ ಅಧಿಕಾರಿಗಳನ್ನು ತನಿಖೆಗೆ ಒಳಪಡಿಸಿ ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು. ಅಕ್ರಮದಲ್ಲಿ ಭಾಗಿಯಾಗಿರುವ ಎಲ್ಲ ಅಧಿಕಾರಿಗಳನ್ನು ಬಂಧಿಸಬೇಕು. ಅಂತಹ ಅಧಿಕಾರಿಗಳಿಂದಲೇ ಸರ್ಕಾರಕ್ಕೆ ಉಂಟಾಗಿರುವ ನಷ್ಟವನ್ನು ಭರಿಸಬೇಕು" ಎಂದು ಒತ್ತಾಯಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net