ಶಾಸಕ ಉದಯ್ ಗರುಡಾಚಾರ್​ಗೆ ಶಿಕ್ಷೆ ಪ್ರಕಟವಾದ ದಿನವೇ ಜಾಮೀನು ಮಂಜೂರು

uday garudachar
Published on

ಬೆಂಗಳೂರು: ಎರಡು ತಿಂಗಳ ಜೈಲು ಶಿಕ್ಷೆಗೆ ಗುರಿಯಾಗಿದ್ದ ಚಿಕ್ಕಪೇಟೆ ಬಿಜೆಪಿ ಶಾಸಕ ಉದಯ್ ಗರುಡಾಚಾರ್​ಗೆ 42ನೇ ಎಸಿಎಂಎಂ ಕೋರ್ಟ್ ಜಾಮೀನು ನೀಡಿದೆ.

3 ವರ್ಷಕ್ಕಿಂತ ಕಡಿಮೆ ಶಿಕ್ಷೆಯಾಗಿರುವ ಹಿನ್ನೆಲೆ ಜಾಮೀನು ನೀಡಲಾಗಿದ್ದು, 25 ಸಾವಿರ ರೂಪಾಯಿ ಬಾಂಡ್ ಶ್ಯೂರಿಟಿ ಒದಗಿಸಲು ಸೂಚನೆ ನೀಡಿ ನ್ಯಾ.ಜೆ.ಪ್ರೀತ್ ಜಾಮೀನು ಆದೇಶ ಹೊರಡಿಸಿದ್ದಾರೆ.

ಚುನಾವಣಾ ಪ್ರಮಾಣಪತ್ರದಲ್ಲಿ ತಪ್ಪು ಮಾಹಿತಿ ನೀಡಿದ ಪ್ರಕರಣದಲ್ಲಿ ಬಿಜೆಪಿ ಶಾಸಕ ಉದಯ್ ಗರುಡಾಚಾರ್​ಗೆ 10 ಸಾವಿರ ರೂ. ದಂಡ ಹಾಗೂ 2 ತಿಂಗಳು ಜೈಲು ಶಿಕ್ಷೆ ‌ವಿಧಿಸಿ ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ತೀರ್ಪು ಪ್ರಕಟಿಸಿತ್ತು.

2 ಕ್ರಿಮಿನಲ್ ಪ್ರಕರಣಗಳ ಬಗ್ಗೆ ಮಾಹಿತಿ ಮುಚ್ಚಿಟ್ಟಿದ್ದಾರೆ ಎಂದು ಆರೋಪಿಸಿ ವಿರುದ್ಧ ಸೋದರ ಸಂಬಂಧಿ ಎಚ್.ಜಿ.ಪ್ರಶಾಂತ್ ಎಂಬುವರು 2019ರ ಅಕ್ಟೋಬರ್​ನಲ್ಲಿ ಜೆ.ಪಿ ನಗರ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಜನಪ್ರತಿನಿಧಿಗಳ ಕಾಯ್ದೆ ಸೆ.125 ಎ ಅಡಿ ಆರೋಪ ಸಾಬೀತಾಗಿದ್ದು, ಶಾಸಕರಿಗೆ ಶಿಕ್ಷೆ ವಿಧಿಸಲಾಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net