ಪ್ರಾಕೃತಿಕ ವಿಕೋಪ ಎದುರಿಸಲು ಸನ್ನದ್ಧರಾಗಿ

ವಿವಿಧ ಇಲಾಖೆ ಅಧಿಕಾರಿಗಳ ಜತೆ ಶಾಸಕ ಉಮಾನಾಥ ಕೋಟ್ಯಾನ್ ಮಳೆಗಾಲದ ಪೂರ್ವಸಿದ್ಧತೆ ಬಗ್ಗೆ ಸಭೆ ನಡೆಸಿದರು.
ವಿವಿಧ ಇಲಾಖೆ ಅಧಿಕಾರಿಗಳ ಜತೆ ಶಾಸಕ ಉಮಾನಾಥ ಕೋಟ್ಯಾನ್ ಮಳೆಗಾಲದ ಪೂರ್ವಸಿದ್ಧತೆ ಬಗ್ಗೆ ಸಭೆ ನಡೆಸಿದರು.
Published on

ಪ್ರಮುಖ ಮುಖ್ಯಾಂಶಗಳು

  • ಪೂರ್ವಸಿದ್ಧತೆ ಸಭೆಯಲ್ಲಿ ಶಾಸಕ ಉಮಾನಾಥ ಕೋಟ್ಯಾನ್ ಸೂಚನೆ
ಮೂಲ್ಕಿ: ಮುಂದಿನ ಮಳೆಗಾಲದ ಪೂರ್ವಸಿದ್ಧತೆಗಳನ್ನು ಅಧಿಕಾರಿ ವರ್ಗದವರು ಸರಿಯಾಗಿ ಕಾರ್ಯನಿರ್ವಹಿಸಬೇಕು. ಮೆಸ್ಕಾಂ ಇಲಾಖೆಯ ಸಿಬ್ಬಂದಿ ವರ್ಗ ಪ್ರಾಕೃತಿಕ ವಿಕೋಪ ಎದುರಿಸಲು ಸನ್ನದ್ಧರಾಗಬೇಕು ಎಂದು ಶಾಸಕ ಉಮಾನಾಥ ಕೋಟ್ಯಾನ್ ಸೂಚನೆ ನೀಡಿದರು.

ಅಪಾಯಕಾರಿ ಮರ ತೆರವುಗೊಳಿಸಿ

ಮಳೆಗಾಲದ ಪೂರ್ವಭಾವಿಯಾಗಿ ತಾಲೂಕು ವ್ಯಾಪ್ತಿಯಲ್ಲಿ ಅಪಾಯಕಾರಿ ಮರಗಳನ್ನು ಕೂಡಲೇ ತೆರವುಗೊಳಿಸಬೇಕು. ಮಳೆಗಾಲದಲ್ಲಿ ಯಾವುದೇ ಅವಘಡ ನಡೆಯದಂತೆ ಎಚ್ಚರಿಕೆ ವಹಿಸಬೇಕು. ಮೂಲ್ಕಿ ಮೂಡುಬಿದಿರೆ ರಾಜ್ಯ ಹೆದ್ದಾರಿಯ ಇಕ್ಕೆಲಗಳಲ್ಲಿ ಸೂಕ್ತ ಚರಂಡಿ ನಿರ್ಮಾಣ ಹಾಗೂ ಹೂಳೆತ್ತುವಿಕೆ ಶೀಘ್ರದಲ್ಲಿ ಆಗಬೇಕು ಎಂದು ಅಧಿಕಾರಿಗಳಿಗೆ ಶಾಸಕರು ಸೂಚಿಸಿದರು.
ಮೂಲ್ಕಿ ತಾಲೂಕು ಪ್ರಜಾಸೌಧದ ಸೇವಕ ಕಚೇರಿಯಲ್ಲಿ ಮಳೆಗಾಲದ ಪೂರ್ವಸಿದ್ಧತೆ ಬಗ್ಗೆ ತಾಲೂಕು ವ್ಯಾಪ್ತಿಯ ಮೆಸ್ಕಾಂ, ಲೋಕೋಪಯೋಗಿ ಇಲಾಖೆ, ಅರಣ್ಯ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.
ತಹಸೀಲ್ದಾರ್ ಶ್ರೀಧರ ಮುಂದಲಮನಿ, ಕಿನ್ನಿಗೋಳಿ ಪಟ್ಟಣ ಪಂಚಾಯಿತಿ ಅಧ್ಯಕ್ಷ ಗುರುರಾಜ್ ಮಲ್ಲಿಗೆಯಂಗಡಿ, ಮೂಲ್ಕಿ ನಪಂ ಮುಖ್ಯಾಧಿಕಾರಿ ಮಧುಕರ್, ಕಿನ್ನಿಗೋಳಿ ಪಪಂ ಮುಖ್ಯಾಧಿಕಾರಿ ಜಯಶಂಕರ್, ಮೂಲ್ಕಿ ಮೆಸ್ಕಾಂ ಉಪವಿಭಾಗ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ರಾಮಕೃಷ್ಣ ಐತಾಳ, ಎಸ್‌ಒ ಕೃಷ್ಣಪ್ಪ, ಲೋಕೋಪಯೋಗಿ ಇಲಾಖೆಯ ಅಧಿಕಾರಿ ಶ್ರೀಧರ್ ಮತ್ತು ಅರಣ್ಯ ಇಲಾಖೆಯ ಸಹಾಯಕ ಅಧಿಕಾರಿಗಳು ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net