ಮೇಲ್ಮನೆ ಒಂದು ಸ್ಥಾನಕ್ಕೆ ಉಪ ಚುನಾವಣೆ; ಬಸವನಗೌಡ ಬಾದರ್ಲಿ ಅವಿರೋಧ ಆಯ್ಕೆ ನಿಶ್ಚಿತ

bad
Published on

ಬೆಂಗಳೂರು: ಲೋಕಸಭೆ ಸದಸ್ಯ ಜಗದೀಶ ಶೆಟ್ಟರ್ ರಾಜೀನಾಮೆಯಿಂದ ತೆರವಾಗಿರುವ ವಿಧಾನ ಪರಿಷತ್ ಸ್ಥಾನಕ್ಕೆ ನಡೆಯುವ ಉಪ ಚುನಾವಣೆಗೆ ಕಾಂಗ್ರೆಸ್‌ನಿಂದ ಬಸವನಗೌಡ ಬಾದರ್ಲಿ ಮಾತ್ರ ಮೂರು ನಾಮಪತ್ರ ಸಲ್ಲಿಸಿದ್ದಾರೆ.

ನಾಮಪತ್ರ ಸಲ್ಲಿಕೆಗೆ ಮಂಗಳವಾರ ಕೊನೆಯ ದಿನವಾಗಿತ್ತು. ಆದರೆ, ಬಸವನಗೌಡ ಬಾದರ್ಲಿ ಹೊರತುಪಡಿಸಿ ಯಾರೊಬ್ಬರೂ ನಾಮಪತ್ರ ಸಲ್ಲಿಸಿಲ್ಲ. ಹಾಗಾಗಿ ಅವರು ಅವಿರೋಧ ಆಯ್ಕೆಯಾಗುವುದು ನಿಶ್ಚಿತವಾಗಿದೆ. ಜು.5 ರಂದು ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದ್ದು, ಅಂದು ಬಸವನಗೌಡ ಬಾದರ್ಲಿ ಅವಿರೋಧ ಆಯ್ಕೆ ೋಷಣೆಯಾಗಲಿದೆ.

ಜಗದೀಶ ಶೆಟ್ಟರ್ ಅವರು 2023ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿದ್ದರು. ಕಾಂಗ್ರೆಸ್ ಟಿಕೆಟ್ ಪಡೆದು ಚುನಾವಣೆಗೆ ಸ್ಪರ್ಧಿಸಿ ಪರಾಭವಗೊಂಡಿದ್ದರು. ಆದರೂ ಕಾಂಗ್ರೆಸ್ ಅವರನ್ನು ಮೇಲ್ಮನೆಗೆ ಆಯ್ಕೆ ಮಾಡಿತ್ತು. ಬಳಿಕ ನಡೆದ ರಾಜಕೀಯ ಬೆಳವಣಿಗೆಯಲ್ಲಿ ಕಾಂಗ್ರೆಸ್ ಬಿಟ್ಟು ಮತ್ತೆ ಬಿಜೆಪಿ ಸೇರ್ಪಡೆಗೊಂಡ ಜಗದೀಶ ಶೆಟ್ಟರ್ ಜನವರಿ 25,2024 ರಂದು ರಾಜೀನಾಮೆ ಸಲ್ಲಿಸಿದ್ದರು. ಅವರ ಮೇಲ್ಮನೆ ಅವಧಿ ಜೂನ್ 14,2028ರ ವರೆಗೆ ಇತ್ತು. ಬಳಿಕ ಜಗದೀಶ ಶೆಟ್ಟರ್ ಬೆಳಗಾವಿಯಿಂದ ಲೋಕಸಭೆ ಸದಸ್ಯರಾಗಿ ಚುನಾಯಿತರಾಗಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net