ಎಂಎಲ್ಸಿ ಕೆ.ಶಿವಕುಮಾರ್‌ಗೆ ಕೆಯುಡಬ್ಲೂಜೆ ಅಭಿನಂದನೆ ಸೆ.18ಕ್ಕೆ

Kuwj (1)
Published on

ಬೆಂಗಳೂರು:

ವಿಧಾನ ಪರಿಷತ್‌ಗೆ ನೂತನ ಸದಸ್ಯರಾಗಿ ನಾಮಕರಣಗೊಂಡಿರುವ ಹಿರಿಯ ಪತ್ರಕರ್ತರಾದ ಕೆ.ಶಿವಕುಮಾರ್ ಅವರಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ವತಿಯಿಂದ ಸೆ.18ರಂದು ಗುರುವಾರ ಬೆಳಿಗ್ಗೆ 11 ಗಂಟೆಗೆ ಕಂದಾಯ ಭವನದಲ್ಲಿರುವ ಕೆಯುಡಬ್ಲೂಜೆ ಸಭಾಂಗಣದಲ್ಲಿ ಅಭಿನಂದನಾ ಸಮಾರಂಭವನ್ನು ಏರ್ಪಡಿಸಲಾಗಿದೆ.

ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ಅಭಿನಂದಿಸಲಿದ್ದು, ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಇದೇ ಸಂದರ್ಭದಲ್ಲಿ ನಟ, ನಿರ್ದೇಶಕ ದ್ವಾರಕೀಶ್ ಹೆಸರಿನಲ್ಲಿ 2 ಲಕ್ಷ ರೂ ನೀಡಿ ದತ್ತಿನಿಧಿ ಸ್ಥಾಪನೆ ಮಾಡಿರುವ ಹುಣಸೂರು ಶಾಸಕ ಜಿ.ಡಿ.ಹರೀಶ್ ಗೌಡ ಅವರನ್ನು ಸನ್ಮಾನಿಸಲಾಗುವುದು. ಕಾರ್ಯಕ್ರಮದಲ್ಲಿ ಸಂಘದ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net