ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆದ್ಯತೆ - ಎಂಎಲ್‌ಸಿ ಐವನ್ ಡಿಸೋಜ

mng-24june-vakilara sanga
Published on



ಮಂಗಳೂರು : ಮಂಗಳೂರು ವಕೀಲರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಜಿಲ್ಲಾ ನ್ಯಾಯಾಲಯದ ಸಂಕೀರ್ಣದಲ್ಲಿ ನಡೆಯಿತು.
ಕಾರ್ಯಕ್ರಮ ಉದ್ಘಾಟಿಸಿದ ಎಂಎಲ್‌ಸಿ ಐವನ್ ಡಿಸೋಜ ಮಾತನಾಡಿ ಮಂಗಳೂರಿನಲ್ಲಿ ಸಂಚಾರಿ ಹೈಕೋರ್ಟ್ ಪೀಠ
ಸ್ಥಾಪನೆಗೆ ಶ್ರಮಿಸುವುದಾಗಿ ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶ ರವೀಂದ್ರ ಎಂ ಜೋಶಿ ವಹಿಸಿದ್ದರು.
ವಕೀಲರ ಸಂಘದ ನಿಕಟಪೂರ್ವ ಅಧ್ಯಕ್ಷ ಪೃಥ್ವಿರಾಜ್ ರೈ ಅವರು ನೂತನ ಸಮಿತಿಗೆ ಶುಭ ಹಾರೈಸಿದರು.
ಸಂಘದ ಉಪಾಧ್ಯಕ್ಷ ಸುಜಿತ್ ಕುಮಾರ್, ಕೋಶಾಧಿಕಾರಿ ಗಿರೀಶ್ ಶೆಟ್ಟಿ, ಜತೆ ಕಾರ್ಯದರ್ಶಿ ಜ್ಯೋತಿ ಉಪಸ್ಥಿತರಿದ್ದರು.
ಸಂಘದ ನೂತನ ಅಧ್ಯಕ್ಷ ರಾಘವೇಂದ್ರ ಎಚ್ ವಿ ಸ್ವಾಗತಿಸಿ, ಪ್ರಧಾನ ಕಾರ್ಯದರ್ಶಿ ಶ್ರೀಧರ್ ಎಚ್ ವಂದಿಸಿದರು.
ಆಶಾ ನಾಯಕ್ ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net