ದೇಶದ ಅಭಿವೃದ್ಧಿಗೆ ಹೊಸ ಆಯಾಮ ನೀಡಿದ ಮೋದಿ: ಕಟೀಲ್ ಶ್ಲಾಘನೆ

katil
Published on

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ದೇಶದ ಅಭಿವೃದ್ಧಿಗೆ ಹೊಸ ಆಯಾಮ ದೊರೆತಿದ್ದು, ಕಳೆದ ಏಳು ವರ್ಷಗಳಲ್ಲಿ ಅಭೂತಪೂರ್ವ ಸಾಧನೆ ಮಾಡಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಶ್ಲಾಘಿಸಿದರು.

ಪಕ್ಷದ ರಾಜ್ಯ ಕಚೇರಿ ಆವರಣದಲ್ಲಿ 75ನೇ ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ಭಾನುವಾರ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದ ಅವರು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜನಪರ ಹಾಗೂ ದೂರದೃಷ್ಟಿಯ ಆಡಳಿತ ನೀಡುತ್ತಿವೆ ಎಂದರು.

ಕೇಂದ್ರ ಮಾಜಿ ಸಚಿವ ಡಿ.ವಿ.ಸದಾನಂದ ಗೌಡ, ರಾಜ್ಯ ಉಪಾಧ್ಯಕ್ಷರಾದ ವಿಜಯೇಂದ್ರ, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಎನ್.ರವಿಕುಮಾರ್, ಸಿದ್ದರಾಜು, ರಾಜ್ಯ ಪದಾಧಿಕಾರಿಗಳು, ವಿವಿಧ ಮೋರ್ಚಾದ ರಾಜ್ಯ ಅಧ್ಯಕ್ಷರು, ಪಕ್ಷದ ಹಲವು ಮುಖಂಡರು ಭಾಗವಹಿಸಿದ್ದರು.

ಇದೇ ಸಂದರ್ಭದಲ್ಲಿ ನಳಿನ್‍ಕುಮಾರ್ ಕಟೀಲ್ ಮತ್ತು ಇತರ ಪದಾಧಿಕಾರಿಗಳು ಭಾರತ ಮಾತೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಸಮರ್ಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net