

ಕರೊನಾ ಸ್ಥಿತಿಗತಿ ಮತ್ತು ಲಾಕ್ಡೌನ್ ಅನುಷ್ಠಾನದ ಕುರಿತು ಕರ್ನಾಟಕ ಸಹಿತ ಹಲವು ರಾಜ್ಯಗಳ ಮುಖ್ಯಮಂತ್ರಿಗಳ ಜತೆ ಪ್ರಧಾನಿ ನರೇಂದ್ರ ಮೋದಿ ಗುರುವಾರ ಬೆಳಗ್ಗೆ 11ಕ್ಕೆ ವಿಡಿಯೋ ಕಾನ್ಪರೆನ್ಸ್ ಮೂಲಕ ಸಭೆ ನಡೆಸಲಿದ್ದಾರೆ.
ತಮಿಳುನಾಡು, ಬಿಹಾರ, ರಾಜಸ್ಥಾನ, ಮಧ್ಯಪ್ರದೇಶ, ಗುಜರಾತ್, ಹರಿಯಾಣ, ಆಂಧ್ರಪ್ರದೇಶ, ಅಸ್ಸಾಂ, ಮಹಾರಾಷ್ಟ್ರ, ಕೇರಳದ ಸಿಎಂಗಳು, ಗೃಹ, ಆರೋಗ್ಯ ಸಚಿವರು, ಸರ್ಕಾರದ ಮುಖ್ಯ ಕಾರ್ಯದರ್ಶಿಗಳು, ಗೃಹ, ಆರೋಗ್ಯ ಇಲಾಖೆಗಳ ಕಾರ್ಯದರ್ಶಿಗಳು ಭಾಗವಹಿಸುವಂತೆ ಸೂಚಿಸಲಾಗಿದೆ.