ಶತಾಯುಷಿ ತಾಯಿಯನ್ನು ಭೇಟಿ ಮಾಡಿದ ಚಾಯ್​ವಾಲಾ…

modi mom
Published on

ಗಾಂಧಿನಗರ: ತಮ್ಮ ತವರು ರಾಜ್ಯ ಗುಜರಾತ್‌ಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಭಾನುವಾರ ಗಾಂಧಿನಗರದಲ್ಲಿ ಇರುವ ನಿವಾಸದಲ್ಲಿ ತಮ್ಮ ತಾಯಿ ಹೀರಾಬೆನ್ ಅವರನ್ನು ಭೇಟಿ ಮಾಡಿದರು.

ಪ್ರಧಾನಿ ಮೋದಿ ಅವರು ತಾಯಿ ಹೀರಾಬೆನ್ ಅವರ ಪಾದಗಳನ್ನು ಸ್ಪರ್ಶಿಸಿ ಆಶಿರ್ವಾದ ಪಡೆದುಕೊಂಡಿದ್ದಾರೆ. ಮೋದಿ, ತಮ್ಮ ತಾಯಿ ಪಕ್ಕದಲ್ಲಿ ಕುಳಿತುಕೊಂಡು ಸಂಜೆ ಚಹಾ ಸವಿದಿದ್ದಾರೆ. ಜೂ.18ರಂದು ಅವರ 100ನೇ ಹುಟ್ಟುಹಬ್ಬದಂದು ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ತಾಯಿ ಹೀರಾಬೆನ್ ಅವರನ್ನು ಕೊನೆಯ ಬಾರಿ ಭೇಟಿ ಮಾಡಿದ್ದರು.

ಈ ಮಧ್ಯೆ ಗುಜರಾತ್ ವಿಧಾನಸಭಾ ಚುನಾವಣೆಯ ಎರಡನೇ ಮತ್ತು ಅಂತಿಮ ಹಂತದ ಮತದಾನ ನಡೆಯುತ್ತಿದ್ದು ಪ್ರಧಾನಿ ಮೋದಿ ಸೋಮವಾರ ಅಹಮದಾಬಾದ್‌ನಲ್ಲಿ ಮತ ಚಲಾಯಿಸಲಿದ್ದಾರೆ. ಪ್ರಧಾನಿ ಮೋದಿ ತಮ್ಮ ಕೊನೆಯ ಚುನಾವಣಾ ರ‌್ಯಾಲಿಯನ್ನು ಅಹಮದಾಬಾದ್‌ನಲ್ಲಿ ಶುಕ್ರವಾರ ನಡೆಸಿದರು.(ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net