ಮೋದಿ ಮತ್ತೊಮ್ಮೆ ಪ್ರಧಾನಿಯಾಗೋದು ಖಚಿತ! ಆದರೆ ರಾಜ್ಯದಲ್ಲಿ ಬಿಜೆಪಿ… ಭವಿಷ್ಯ ನುಡಿದ ಹಿರಿಯ ಸಾಹಿತಿ

WhatsApp Image 2024-03-29 at 5.20.34 PM
Published on

ಮೈಸೂರು: ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭಗೊಳ್ಳುತ್ತಿದ್ದಂತೆ ಆಯಾ ಪಕ್ಷಗಳಲ್ಲಿ ಭಾರೀ ಹಣಾಹಣಿ ನಡೆಯುತ್ತಿದೆ. ಇನ್ನು ಕರ್ನಾಟಕದಲ್ಲಿ ಬಿಜೆಪಿ ಎಷ್ಟು ಸೀಟು ಗೆಲ್ಲಬಹುದು, ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಪಿಎಂ ಆಗಿ ಮುಂದುವರೆಯಲಿದ್ದಾರಾ ಎಂಬುದರ ಬಗ್ಗೆ ರಾಜ್ಯದ ಹಿರಿಯ ಸಾಹಿತಿ ಎಸ್​.ಎಲ್​. ಬೈರಪ್ಪನವರು ಮಾತನಾಡಿದರು.

ಇಂದು ಮೈಸೂರಿನಲ್ಲಿ ಮಾತನಾಡಿದ ಹಿರಿಯ ಸಾಹಿತಿ, "ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ದೇಶದ ಪ್ರಧಾನಿಯಾಗಲಿದ್ದಾರೆ. ಅದು ಖಚಿತ. ಆದರೆ, ಉತ್ತರದ ರಾಜ್ಯಗಳಲ್ಲಿ ಬಿಜೆಪಿ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ. ಕರ್ನಾಟಕದಲ್ಲಿ ಈ ಬಾರಿ ಬಿಜೆಪಿ ಗೆಲ್ಲೋದು ಅರ್ಧದಷ್ಟು ಮಾತ್ರ! ರಾಜ್ಯದಲ್ಲಿ ಕಮಲ ಹೆಚ್ಚು ಸ್ಥಾನಗಳನ್ನು ಗೆಲ್ಲೋದು ಕಷ್ಟ" ಎಂದು ಭವಿಷ್ಯ ನುಡಿದರು.

"ಕರ್ನಾಟಕದಲ್ಲಿ ಕಾಂಗ್ರೆಸ್ ಬಲಿಷ್ಠವಾಗಿದೆ. ಇಲ್ಲಿ ಕಮಲ ಬಹಳ ವೀಕ್ ಆಗಿದೆ. ಉತ್ತರಪ್ರದೇಶದ ಮಾದರಿಯಲ್ಲಿ ನಮ್ಮ ರಾಜ್ಯದಲ್ಲೂ ಬಿಜೆಪಿ ಸರ್ಕಾರ ಇದ್ದಿದ್ದರೇ ಹೆಚ್ಚಿನ ಸೀಟು ಗೆಲ್ಲಬಹುದಿತ್ತು. ಬಿಜೆಪಿ ಅಧಿಕಾರದಲ್ಲಿದ್ದಾಗ ಸರ್ಕಾರಕ್ಕೆ ಅಧಿಕಾರಿಗಳ ಮೇಲೆ ಹಿಡಿತ ಇರಲಿಲ್ಲ.

ಅದೇ ಕಾರಣದಿಂದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸೋಲು ಅನುಭವಿಸಿತು. ಆದರೀಗ ಕಾಂಗ್ರೆಸ್ ಸರ್ಕಾರಕ್ಕೆ ಅಧಿಕಾರಿಗಳ ಮೇಲೆ ಸಂಪೂರ್ಣ ಹಿಡಿತವಿದೆ. ಈ ಬಾರಿಯ ಚುನಾವಣೆಯಲ್ಲಿ ಮೋದಿ ಅಲೆ ಕಡಿಮೆ ಆಗಿದೆಯಾ ಎಂಬುದು ಗೊತ್ತಿಲ್ಲ" ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net