

ನವದೆಹಲಿ: ಹಿಂದೂ ದೇವತೆಗಳ ಬಗ್ಗೆ ಆಕ್ಷೇಪಾರ್ಹ ಟ್ವೀಟ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಲ್ಟ್ ನ್ಯೂಸ್ ಸಹ-ಸಂಸ್ಥಾಪಕ ಮೊಹಮ್ಮದ್ ಜುಬೇರ್ ಪೊಲೀಸ್ ಕಸ್ಟಡಿ ಅವಧಿಯನ್ನು 4 ದಿನಗಳವರೆಗೆ ವಿಸ್ತರಿಸಲಾಗಿದೆ.
ಇನ್ನೂ ವಿಚಾರಣೆಗೆ ಕೋರಿ 5 ದಿನಗಳವರೆಗೆ ವಿಸ್ತರಿಸುವಂತೆ ಪೊಲೀಸರು ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ವಾದ-ವಿವಾದಗಳ ಆಲಿಸಿದ ನಂತರ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಸ್ನಿಗ್ಧಾ ಸರ್ವರಿಯಾ ನಾಲ್ಕು ದಿನಗಳವರೆಗೆ ಅನುಮತಿ ನೀಡಿದ್ದಾರೆ.
2018ರ ಜುಬೇರ್ ಮಾಡಿದ್ದ ಆಕ್ಷೇಪಾರ್ಹ ಟ್ವೀಟ್ ಕೋಮು ಸೌಹಾರ್ದತೆಗೆ ಧಕ್ಕೆ ತರುವಂತಾಗಿದ್ದು, ಅಂತಹ ಸಂದರ್ಭಗಳಲ್ಲಿ, ಅಂತಹ ಟ್ವೀಟ್‌ಗಳನ್ನು ಅನ್ನು ಪೋಸ್ಟ್ ಮಾಡುವ ಹಿಂದಿನ ಉದ್ದೇಶವು ಮುಖ್ಯವಾಗಿರುತ್ತದೆ ಎಂಬುದು ಪೊಲೀಸರ ವಾದವಾಗಿದೆ.
2018ರಲ್ಲಿ ಟ್ವೀಟರ್ ನಲ್ಲಿ ಪೋಸ್ಟ್ ಮಾಡುವ ಮೂಲಕ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಜುಬೈರ್ ನನ್ನು ಸೋಮವಾರ ದೆಹಲಿ ಪೊಲೀಸರು ಬಂಧಿಸಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.(ಏಜೆನ್ಸೀಸ್)