ಅಕ್ರಮ ಹಣ ವರ್ಗಾವಣೆ ಪ್ರಕರಣ: ಅನಿಲ್ ಅಂಬಾನಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ED ದಾಳಿ!

Untitled design (53)
Published on

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಿಲಯನ್ಸ್ ಗ್ರೂಪ್ ಅಧ್ಯಕ್ಷ ಅನಿಲ್ ಅಂಬಾನಿಗೆ ಸಂಬಂಧಿಸಿದ ದೆಹಲಿ ಮತ್ತು ಮುಂಬೈನಲ್ಲಿರುವ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ (ED) ದಾಳಿ ನಡೆಸಿದೆ ಎಂದು ಗುರುವಾರ ವರದಿಯಾಗಿದೆ.

ತನಿಖಾ ಸಂಸ್ಥೆ ಸುಮಾರು 35 ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆಸುತ್ತಿದೆ. ಇಡಿ ನಡೆಸಿದ ಪ್ರಾಥಮಿಕ ತನಿಖೆಯು "ಬ್ಯಾಂಕ್‌ಗಳು, ಷೇರುದಾರರು, ಹೂಡಿಕೆದಾರರು ಮತ್ತು ಇತರ ಸಾರ್ವಜನಿಕ ಸಂಸ್ಥೆಗಳನ್ನು ವಂಚಿಸುವ ಮೂಲಕ ಸಾರ್ವಜನಿಕ ಹಣವನ್ನು ವಂಚನೆ ಮಾಡುವ ಯೋಜನೆ" ಇದಾಗಿದೆ ಎಂದು ಇಡಿ ಬಹಿರಂಗಪಡಿಸಿದೆ ಎಂದು ವರದಿ ಉಲ್ಲೇಖಿಸಿದೆ.

3,000 ಕೋಟಿ ರೂ. ಸಾಲ ಅಕ್ರಮ

2017–2019ರ ಅವಧಿಯಲ್ಲಿ ಯೆಸ್ ಬ್ಯಾಂಕಿನಿಂದ ಪಡೆದ 3,000 ಕೋಟಿ ರೂ. ಸಾಲವನ್ನು ಅಕ್ರಮವಾಗಿ ವರ್ಗಾಯಿಸಲಾಗಿದೆ ಎಂಬ ಆರೋಪದ ಮೇಲೆ ದಾಳಿ ನಡೆದಿದೆ. ರಿಲಯನ್ಸ್ ಅನಿಲ್ ಅಂಬಾನಿ ಗ್ರೂಪ್ (RAAGA) ಸಂಸ್ಥೆಗಳಿಗೆ ವಿತರಿಸುವ ಸ್ವಲ್ಪ ಸಮಯದ ಮೊದಲು ಈ 3,000 ಕೋಟಿ ರೂ. ಹಣವನ್ನು ಬ್ಯಾಂಕಿನ ಪ್ರವರ್ತಕರೊಂದಿಗೆ ಸಂಪರ್ಕ ಹೊಂದಿರುವ ಸಂಸ್ಥೆಗಳಿಗೆ ವರ್ಗಾಯಿಸಲಾಗಿದೆ ಎಂದು ED ಹೇಳಿಕೊಂಡಿದೆ.

ಇದೇ ಜೂ.13ರಂದು ಅನಿಲ್ ಅಂಬಾನಿ ಮತ್ತು ರಿಲಯನ್ಸ್ ಕಮ್ಯುನಿಕೇಷನ್ಸ್ (ಆರ್‌ಕಾಮ್) ಅನ್ನು ಆರ್‌ಬಿಐ ಮಾರ್ಗಸೂಚಿಗಳ ಅಡಿಯಲ್ಲಿ 'ವಂಚನೆ' ಎಂದು ಘೋಷಿಸಲು ಎಸ್‌ಬಿಐ ಕ್ರಮ ಕೈಗೊಂಡ ನಂತರ ಈ ದಾಳಿ ನಡೆದಿದೆ(ಏಜೆನ್ಸೀಸ್​​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net