Cruelty to Monkey: ಹರಿಯಾಣದ ಫರಿದಾಬಾದ್‌ನಲ್ಲಿ ಕೋತಿಯನ್ನು ಹಿಡಿದು ಥಳಿಸಿ, ಬೀದಿಯಲ್ಲಿ ಮೆರವಣಿಗೆ ಮಾಡಿದ್ರು ಎನ್ನಲಾದ ವಿಡಿಯೋ ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ವಿಡಿಯೋ ನೋಡಿದ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದು, ಮೂಕಪ್ರಾಣಿಯ ಮೇಲೆ ಇಂಥ ಅಮಾನವೀಯವಾಗಿ ನಡೆದುಕೊಂಡಿದ್ದಕ್ಕೆ ಕಿಡಿಕಾರಿದ್ದಾರೆ.
ಸೋಶಿಯಲ್ ಮೀಡಿಯಾದಲ್ಲಿ ಹರಿದಾಡ್ತಿರೋ ವಿಡಿಯೋಗಳಲ್ಲಿ ಕೋತಿಯನ್ನು ಹಿಡಿದು ಥಳಿಸಿರೋ ದೃಶ್ಯಗಳು ಕಾಣಿಸಿಕೊಂಡಿವೆ. ಈ ಘಟನೆ ಬಗ್ಗೆ ಈಗ ಹಲವು ಪ್ರಶ್ನೆಗಳು ಎದ್ದಿವೆ. ಕೋತಿಯನ್ನು ಹಿಡಿಯಲು ಅನುಮತಿ ಕೊಟ್ಟಿದ್ದು ಯಾರು? ಅದನ್ನು ಸರಿಯಾದ ರೀತಿಯಲ್ಲಿ ನೋಡಿಕೊಳ್ಳಲಾಗಿದೆಯಾ? ಸದ್ಯ ಕೋತಿ ಎಲ್ಲಿದೆ, ಅದರ ಆರೋಗ್ಯ ಹೇಗಿದೆ? ಈ ಬಗ್ಗೆ ಅಧಿಕಾರಿಗಳು ಸ್ಪಷ್ಟನೆ ನೀಡಬೇಕು, ಘಟನೆಯ ಬಗ್ಗೆ ಸೂಕ್ತ ತನಿಖೆ ನಡೆಸಬೇಕು ಎಂದು ನೆಟ್ಟಿಗರು ಒತ್ತಾಯಿಸುತ್ತಿದ್ದಾರೆ.
ಕೋತಿಗಳು ಜನರ ಮೇಲೆ ದಾಳಿ ಮಾಡುವುದು, ಮನೆಗಳ ಬಳಿ ಬಂದು ವಸ್ತುಗಳನ್ನು ಹಾಳು ಮಾಡುವುದು ಸೇರಿದಂತೆ ಹಲವು ಘಟನೆಗಳು ಸಾರ್ವಜನಿಕರಲ್ಲಿ ಆತಂಕ ಮೂಡಿಸಿವೆ. ಆದ್ರೆ, ಇಂಥ ಸಮಸ್ಯೆಗಳನ್ನು ಬಗೆಹರಿಸುವಾಗ ಪ್ರಾಣಿಗಳಿಗೆ ಹಿಂಸೆ ನೀಡದೆ, ಕಾನೂನು ಪ್ರಕಾರ ಕ್ರಮ ಕೈಗೊಳ್ಳಬೇಕು ಅನ್ನೋದು ಪ್ರಾಣಿ ಪ್ರೀಯರ ಒತ್ತಾಯ.
ಫರಿದಾಬಾದ್‌ನಲ್ಲಿ ನಡೆದಿದೆಯೆನ್ನಲಾದ ಈ ಘಟನೆಯ ಬಗ್ಗೆ ಇನ್ನಷ್ಟು ಸ್ಪಷ್ಟ ಮಾಹಿತಿ ಹೊರಬರಬೇಕಿದೆ. ಕೋತಿಗೆ ಹಿಂಸೆ ನೀಡಲಾಗಿದೆಯೇ ಎಂಬ ಬಗ್ಗೆ ಅಧಿಕಾರಿಗಳು ತನಿಖೆ ನಡೆಸಿ, ಸತ್ಯಾಂಶವನ್ನು ಬಹಿರಂಗಪಡಿಸಬೇಕು ಎಂದು ಒತ್ತಾಯಿಸಲಾಗುತ್ತಿದೆ. ವಿಡಿಯೋ ವೈರಲ್ ಆಗುತ್ತಿದ್ದಂತೆ ಮೂಕಪ್ರಾಣಿಗಳ ಮೇಲೆ ಇಂಥ ಕ್ರೌರ್ಯ ಎಸಗಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ನೆಟ್ಟಿಗರು ಆಗ್ರಹಿಸುತ್ತಿದ್ದಾರೆ.