ಮೂಕಪ್ರಾಣಿಗಳ ಮೇಲೆ ಮೃಗೀಯ ವರ್ತನೆ, ಕೋತಿಗಳ ಮಾರಣಹೋಮ!

monkeys Death
Published on

ಉಡುಪಿ: ಮೂಕಪ್ರಾಣಿಗಳ ಮೇಲೆ ಮೃಗೀಯ ವರ್ತನೆ ಹೆಚ್ಚುತ್ತಲೇ ಇದೆ. ಕಳೆದ ವರ್ಷ ನೂರಾರು ಮಂಗಗಳ ಮಾರಣಹೋಮ ನಡೆದಿತ್ತು. ಈಗಲೂ ಆ ಕೃತ್ಯ ಮುಂದುವರಿದಿದ್ದು, ಕಿಡಿಗೇಡಿಗಳು ಎರಡು ಗೋಣಿ ಚೀಲಗಳಲ್ಲಿ ಕೋತಿಗಳ ಮೃತದೇಹಗಳನ್ನು ತುಂಬಿ ಕಾಡಿನಲ್ಲಿ ಬಿಸಾಕಿ ಹೋಗಿದ್ದಾರೆ.

ಹೆಬ್ರಿ ತಾಲೂಕಿನ ನಾಡ್ಪಾಲು ಗ್ರಾಮದ ಕಾಡಿನಲ್ಲಿ ಸೆಣಬಿನ ಗೋಣಿಚೀಲಗಳು ಪತ್ತೆಯಾಗಿವೆ. ಇದನ್ನು ಕಂಡ ಸ್ಥಳೀಯರು ತೆರೆದು ನೋಡಿದಾಗ ಸುಮಾರು 20 ಕೋತಿಗಳ ಶವಗಳು ಅದರಲ್ಲಿ ಇದ್ದವು. ಇದನ್ನೂ ಓದಿರಿ ಭಾರತಕ್ಕೆ ಅಭಿನಂದನೆಗಳು ನನ್ನ ಮಗನನ್ನು ಬಂಧಿಸಿದ್ದೀರಿ: ರಿಯಾ ತಂದೆಯ ನೋವಿನ ಮಾತು!

ತೋಟಕ್ಕೆ ಬಂದು ಉಪಟಳ ನೀಡುತ್ತಿದ್ದ ಮಂಗಗಳಿಗೆ ಕಿಡಿಗೇಡಿಗಳು ವಿಷವಿಟ್ಟು ಕೊಂದಿರಬಹುದು ಎಂದು ಸ್ಥಳೀಯರು ಶಂಕಿಸಿದ್ದಾರೆ.

ಆಗುಂಬೆ ಘಾಟಿ ಪ್ರದೇಶದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಮಂಗಗಳು ಕಾಣಿಸಿಕೊಳ್ಳುತ್ತವೆ. ಸುತ್ತಮುತ್ತಲ ತೋಟಗಳಿಗೆ ಮಂಗಗಳು ಬರುವುದು ಸಾಮಾನ್ಯ. ರೈತರಿಗೆ ಉಪಟಳ ಜಾಸ್ತಿಯಾದಾಗ ವಿಷವಿಟ್ಟು ಮಂಗಗಳನ್ನು ಕೊಂದಿರುವ ಸಾಧ್ಯತೆ ಇದೆ. ಕಳೆದ ವರ್ಷವೂ ನೂರಾರು ಸಂಖ್ಯೆಗಳಲ್ಲಿ ಕೋತಿಗಳ ಮಾರಣಹೋಮ ನಡೆದಿತ್ತು.

ಶಿವಮೊಗ್ಗ ಜಿಲ್ಲೆಯಲ್ಲಿ ದುಷ್ಕೃತ್ಯ ಎಸಗಿ ನಾಡ್ಪಾಲು ಸಮೀಪ ಬಿಸಾಕಿ ಹೋಗಿದ್ದಾರೆ ಎನ್ನಲಾಗಿದೆ. ಪೊಲೀಸರು, ಅರಣ್ಯ ಇಲಾಖೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net