ಈ ಬಾರಿ ಉತ್ತಮ ಮಳೆ ನಿರೀಕ್ಷೆ..ಮೇ 31ಕ್ಕೇ ಕರ್ನಾಟಕಕ್ಕೆ ಮುಂಗಾರು ಪ್ರವೇಶ

rain
Published on

ಬೆಂಗಳೂರು: ರಾಜ್ಯದಲ್ಲಿ ಪೂರ್ವ ಮುಂಗಾರು ತಡವಾಗಿಯಾದರೂ ಸುರಿಯುತ್ತಿದ್ದು, ನೈರುತ್ಯ ಮುಂಗಾರು ಇದೇ ಮೇ 31 ರಂದು ಕೇರಳ ಮೂಲಕ ಕರ್ನಾಟಕ ಪ್ರವೇಶಿಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಕಳೆದ ಬಾರಿ ಮಳೆ ಕೊರತೆಯಿಂದಾಗಿ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳು ಭೀಕರ ಬರ ಎದುರಿಸಿದ್ದವು. ಆದರೆ, ಈ ಬಾರಿ ಮುಂಗಾರು ಉತ್ತಮ ರೀತಿಯಲ್ಲಿ ಬರುವ ನಿರೀಕ್ಷೆ ಇದೆ. ಆಗಸ್ಟ್‌ ಮತ್ತು ಸೆಪ್ಟಂಬರ್‌ ತಿಂಗಳುಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ರಾಜ್ಯದ ಕರಾವಳಿ ಭಾಗಕ್ಕೆ ಮುಂಗಾರು ಜೂನ್‌ 2 ಅಥವಾ 3ಕ್ಕೆ ಅಪ್ಪಳಿಸುವ ನಿರೀಕ್ಷೆ ಇದೆ. ಈ ನಡುವೆ ಮೇ 26ರಂದು ಸಂಜೆ ರೆಮಲ್ ಚಂಡಮಾರುತ ಬಾಂಗ್ಲಾದೇಶ ಕರಾವಳಿ ಮೂಲಕ ಭಾರತದ ಈಶಾನ್ಯ ರಾಜ್ಯಗಳಿಗೆ ಅಪ್ಪಳಿಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಇದಲ್ಲದೇ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಮುಂದಿನ 24 ಗಂಟೆಗಳ ಕಾಲ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಉತ್ತರ ಒಳನಾಡಿನಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net