

Monsoon Rains: ಈ ವರ್ಷ ಹಿಂದಿಗಿಂತ ಬಹುಬೇಗನೇ ಮುಂಗಾರು ಪ್ರವೇಶಿಸಲಿದೆ ಎಂದು ಈಗಾಗಲೇ ಭಾರತೀಯ ಹವಾಮಾನ ಇಲಾಖೆ ತಿಳಿಸಿದ್ದು, ಮುಂದಿನ 2 ದಿನಗಳಲ್ಲಿ ಕೇರಳ ರಾಜ್ಯಕ್ಕೆ ಮುಂಗಾರು ಪ್ರವೇಶಿಸಲಿದೆ ಎಂದು ವರದಿಗಳು ಸೂಚಿಸಿವೆ.
ಮೇ.24-25ರ ಅವಧಿಯಲ್ಲಿ ಮಾನ್ಸೂನ್ಗೂ ಮುನ್ನವೇ ಮುಂಗಾರು ಪ್ರವೇಶಿಸಲಿದೆ. ಕರ್ನಾಟಕ, ಗೋವಾ, ಕೊಂಕಣ, ಕ್ಯಾರೆಕಲ್ ಪುದುಚೇರಿ, ಮಧ್ಯ ಮಹಾರಾಷ್ಟ್ರ, ತೆಲಂಗಾಣ, ಆಂಧ್ರಪ್ರದೇಶ, ಬಿಹಾರ, ಜಾರ್ಖಂಡ್, ಮೇಘಾಲಯ ರಾಜ್ಯಗಳಲ್ಲಿ ವಾಡಿಕೆಗಿಂತ ಅಧಿಕ ಮಳೆಯಾಗುವ ಸಾಧ್ಯತೆಗಳಿವೆ ಎಂದು ಈಗಾಗಲೇ ಹವಾಮಾನ ಇಲಾಖೆ ತಿಳಿಸಿದೆ.
ಮುಂದಿನ ಎರಡು ದಿನಗಳಲ್ಲಿ ಕೇರಳಕ್ಕೆ ಮುಂಗಾರು ಪ್ರವೇಶಿಸಲು ವಾತಾವರಣ ಅನುಕೂಲಕರವಾಗಲಿದೆ. ಅದೇ ದಿನದಂದು ಕರ್ನಾಟಕದ ಕರಾವಳಿ ಭಾಗಕ್ಕೆ ಮಾರುತಗಳು ಪ್ರವೇಶಿಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.