ಗುಡುಗು ಮಿಂಚು ಸಹಿತ ಭಾರೀ ಮಳೆ ಸುರಿಯುವ ಸಾಧ್ಯತೆ: ಈ ಜಿಲ್ಲೆಯಲ್ಲಿ ಮುನ್ಸೂಚನೆ

Bengaluru Rain
Published on

 ಬೆಂಗಳೂರು:  ಕರ್ನಾಟಕದಲ್ಲಿದಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸುತ್ತಿದ್ದು, ಮೇ 31ಕ್ಕೆ ರಾಜ್ಯಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ

ನೈರುತ್ಯ ಮುಂಗಾರು ಮಳೆ ಇದೇ ಮೇ 31ರಂದು ಕೇರಳದ ಮೂಲಕ ರಾಜ್ಯ ಪ್ರವೇಶಿಸಲಿದೆ. ಈ ಬಾರಿ ಉತ್ತಮ ಮಳೆಯಾಗುವ ನಿರೀಕ್ಷೆಯಿದ್ದು, ರಾಜ್ಯದ ಜನತೆಗೆ ನಿಟ್ಟುಸಿರು ಬಿಟ್ಟಂತಾಗಿದೆ. ರಾಜ್ಯದಲ್ಲಿ ಇನ್ನೂ 4 ದಿನ ಮಳೆಯಾಗುವ ಸಾಧ್ಯತೆಯಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಕರಾವಳಿಯ ದಕ್ಷಿಣ ಕನ್ನಡ, ಉಡುಪಿಯಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಮಳೆಯಾಗುವ ಸಂಭವವಿದೆ. ಮಲೆನಾಡು, ದಕ್ಷಿಣ ಕರ್ನಾಟಕ ಭಾಗದಲ್ಲಿ ಮಳೆ ಪ್ರಮಾಣ ಕಡಿಮೆ ಇದೆ.

ಕೊಡಗು, ಚಿಕ್ಕಮಗಳೂರು, ಹಾಸನ, ಬೆಂಗಳೂರು, ಶಿವಮೊಗ್ಗ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ, ಬಾಗಲಕೋಟೆ, ಬೆಳಗಾವಿ, ಹಾವೇರಿ, ಕಲಬುರಗಿಯಲ್ಲಿ ಗುಡುಗು ಮಿಂಚು ಸಹಿತ ಮುಂದಿನ ಎರಡು ದಿನ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಮೇ 31ರವರೆಗೆ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಗಂಟೆಗೆ 40-50 ಕಿಮೀ ವೇಗದಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು IMD ಮುನ್ಸೂಚನೆ ನೀಡಿದೆ. ಅಲ್ಲದೇ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆಯನ್ನು ನೀಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net