ನಾಳೆಯಿಂದ ರಾಜ್ಯದಲ್ಲಿ ಮತ್ತೆ ಮುಂಗಾರು ಅಬ್ಬರ; ಯೆಲ್ಲೋ ಅಲರ್ಟ್​​ ಘೋಷಿಸಿದ ಹವಾಮಾನ ಇಲಾಖೆ | Yellow Alert

dk - 2025-06-08T095159.393
Published on

Yellow Alert: ನಾಳೆ ರಾಜ್ಯಕ್ಕೆ ಮುಂಗಾರು ಪ್ರವೇಶಿಸಲಿದ್ದು, ಜೂ.9ರಿಂದ 14ರವರೆಗೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆಯಾಗಲಿದ್ದು, ಕೆಲವು ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಿಸಲಾಗಿದೆ.

ಯಲ್ಲೋ ಅಲರ್ಟ್​​ ಜಿಲ್ಲೆಗಳು

ಬಾಗಲಕೋಟೆ, ಬೆಳಗಾವಿ, ಧಾರವಾಡ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಗದಗ, ಬಳ್ಳಾರಿ, ವಿಜಯನಗರದಲ್ಲಿ ಜೂ.12ರಿಂದ 14ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಕೊಟ್ಟಿದೆ.

ಮಾರುತಗಳ ಭಾರೀ ಚಲನೆಯ ಪ್ರಭಾವದಿಂದಾಗಿ ತೀವ್ರ ಮಳೆಯನ್ನು ನಿರೀಕ್ಷೆ ಮಾಡಬಹುದಾಗಿದೆ. ಹವಾಮಾನ ಇಲಾಖೆ ಅನಾಹುತಗಳನ್ನು ತಡೆಗಟ್ಟಲು ಸಾರ್ವಜನಿಕರಿಗೆ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಸೂಚಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net