2024ರಲ್ಲೂ ನರೇಂದ್ರ ಮೋದಿಯೇ ಪ್ರಧಾನಿ; ಸಮೀಕ್ಷೆ ಹೇಳಿದ್ದೇನು?

Narendra Modi
Published on

ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ(NDA)ವನ್ನು ವಿಪಕ್ಷಗಳ ಮೈತ್ರಿಕೂಟ I.N.D.I.A ಸೋಲಿಸಲು ಸಾಧ್ಯವಾಗುವುದಿಲ್ಲ ಎಂದು ಖಾಸಗಿ ಸುದ್ದಿ ಸಂಸ್ಥೆ ನಡೆಸಿದ ಮೂಡ್​ ಆಫ್ ದಿ ನೇಷನ್ ಸಮೀಕ್ಷೆ ತಿಳಿಸಿದೆ.

ಸಮೀಕ್ಷೆಯ ಭಾಗವಾಗಿದ್ದ 1.6 ಲಕ್ಷ ಜನರ ಪೈಕಿ ಶೇ. 54ರಷ್ಟು ಮಂದಿ ವಿಪಕ್ಷಗಳ ಒಕ್ಕೂಟ I.N.D.I.A ಬಿಜೆಪಿಯನ್ನು ಸೋಲಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಇನ್ನು ಶೇ. 33 ರಷ್ಟು ಮಂದಿ ಬಿಜೆಪಿಯನ್ನು ವಿಪಕ್ಷಗಳ ಒಕ್ಕೂಟ I.N.D.I.A ಸೋಲಿಸುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಹಣದುಬ್ಬರ, ಬೆಲೆ ಏರಿಕೆ ಹಾಗೂ ನಿರುದ್ಯೋಗ ಸಮಸ್ಯೆಯಿಂದಾಗಿ ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರಿಯತೆ ಕುಸಿದಿದ್ದು, 2024ರ ಲೋಕಸಭೆ ಚುನಾವಣೆಯಲ್ಲಿ ಅವರ ನೇತೃತ್ವದ NDA ಗೆಲುವು ಸಾಧಿಸಲಿದೆ. ಈಗ ಚುನಾವಣೆ ನಡೆದರು NDA 542ರ ಪೈಕಿ 287 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಸಮೀಕ್ಷೆ ತಿಳಿಸಿದೆ.

Opposition Meeting

ರಾಹುಲ್​ ಗಾಂಧಿ ವರ್ಚಸ್ಸು ಹೆಚ್ಚಳ

ಕಳೆದ ಕೆಲ ತಿಂಗಳಿನಿಂದ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಅವರ ಜನಪ್ರಿಯತೆ ಹೆಚ್ಚಾಗಿದ್ದು, ವಿಪಕ್ಷಗಳ ಒಕ್ಕೂಟ I.N.D.I.A, NDA ವಿರುದ್ಧ ಉತ್ತಮ ಸಾಧನೆ ಮಾಡಲಿದೆ ಎಂದು ಕೆಲವರು ಹೇಳಿದ್ಧಾರೆ. ಕೆಲವರು ವಿಪಕ್ಷಗಳ ಒಕ್ಕೂಟ 2019ರಲ್ಲಿ ಸೋತ ಹಾಗೆ ಹೀನಾಯವಾಗಿ ಸೋಲುತ್ತದೆ ಎಂದಿದ್ದಾರೆ.

ಪ್ರಧಾನಿ ಹುದ್ದೆಗೆ ಸೂಕ್ತ ಅಭ್ಯರ್ಥಿ ಯಾರು ಎಂಬ ಪ್ರಶ್ನೆಗೆ ಶೇ. 52 ರಷ್ಟು ಮಂದಿ ನರೇಂದ್ರ ಮೋದಿ ಅವರತ್ತ ಒಲವು ತೋರಿದ್ದಾರೆ. ಶೇ. 16ರಷ್ಟು ಮಂದಿ ಮುಂದಿನ ಪ್ರಧಾನಿ ಅಭ್ಯರ್ಥಿಯಾಗಿ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಅವರನ್ನು ಹೆಸರಿಸಿದ್ದಾರೆ. ಶೇ. 63ರಷ್ಟು ಮಂದಿ ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯವೈಖರಿ ಉತ್ತಮವಾಗಿದೆ ಎಂದು ಹೇಳಿದ್ದಾರೆ. ಶೇ. 22ರಷ್ಟು ಮಂದಿ ಪ್ರಧಾನಿ ಮೋದಿ ಅವರ ಕಾರ್ಯವೈಖರಿ ಕಳಪೆ ಎಂದಿದ್ದಾರೆ.

ಭಾರತ್​ ಜೋಡೋ ಯಾತ್ರೆ ಬಳಿಕ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಅವರ ವರ್ಚಸ್ಸು ಹೆಚ್ಚಿದ್ದು, ಶೇ. 32ರಷ್ಟು ಮಂದಿ ಕಾಂಗ್ರೆಸ್​ ಪುನಶ್ಚೇತನಕ್ಕೆ ಅವರೇ ಸೂಕ್ತ ವ್ಯಕ್ತಿ ಎಂದಿದ್ದಾರೆ. 2019ರಲ್ಲಿ ಕಾಂಗ್ರೆಸ್​ ಅಧ್ಯಕ್ಷರಾಗಿದ್ದ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಪಕ್ಷ ಲೋಕಸಭೆ ಚುನಾವಣೆಯಲ್ಲಿ ಸೋಲು ಕಂಡಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net