ಮೊರಾರ್ಜಿ, ಏಕಲವ್ಯ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ ಫಲಿತಾಂಶ ಪ್ರಕಟ

kea
Published on

ಬೆಂಗಳೂರು: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯ ಮೊರಾರ್ಜಿ, ಕಿತ್ತೂರು ರಾಣಿ ಚೆನ್ನಮ್ಮ ಸೇರಿ ಇತರ ವಸತಿ ಶಾಲೆಗಳ 6ನೇ ತರಗತಿಗೆ ಪ್ರವೇಶ ಕಲ್ಪಿಸುವ ಸಲುವಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ್ದ ಲಿಖಿತ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಿದೆ.

ಪರೀಕ್ಷೆ ತೆಗೆದುಕೊಂಡಿದ್ದ 1,98,672 ವಿದ್ಯಾರ್ಥಿಗಳ ಜಿಲ್ಲಾವಾರು ರಾೃಂಕ್ ಪಟ್ಟಿಯನ್ನು ವೆಬ್ ಸೈಟ್ನಲ್ಲಿ ಪ್ರಕಟಿಸಲಾಗಿದೆ.

ಸಮಾಜ ಕಲ್ಯಾಣ ಇಲಾಖೆ ಸೀಟ್ ಮ್ಯಾಟ್ರಿಕ್ಸ್ ವಿವರಗಳನ್ನು ಸಲ್ಲಿಸಿದ ನಂತರ ವಸತಿ ಶಾಲೆವಾರು ಸೀಟು ಹಂಚಿಕೆ ಪ್ರಕ್ರಿಯೆಯನ್ನು ಮಾಡಲಾಗುವುದು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್. ರಮ್ಯಾ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net