100 ಕ್ಕೂ ಹೆಚ್ಚು ಬೋರ್ಡ್‌ಗಳ ಜಪ್ತಿ, 26 ಪ್ರಕರಣ ದಾಖಲು

footpath teravu
Published on

ಬೆಂಗಳೂರು : ಪೂರ್ವ ವಿಭಾಗದ ಸಂಚಾರ ಪೊಲೀಸರು ಮುಖ್ಯರಸ್ತೆಯಲ್ಲಿ ಅಂಗಡಿ ಮುಂಗಟ್ಟು ಇಟ್ಟುಕೊಂಡು ಪಾದಚಾರಿಗಳ ಸುಗಮ ಸಂಚಾರಕ್ಕೆ ತೊಂದರೆ ಕೊಡುತ್ತಿದ್ದ 100 ಕ್ಕೂ ಹೆಚ್ಚು ಬಿಲ್ ಬೋರ್ಡ್‌ಗಳನ್ನು ಜಪ್ತಿ ಮಾಡಿ 26 ಪ್ರಕರಣ ದಾಖಲು ಮಾಡಿದ್ದಾರೆ.
ಪೂರ್ವ ವಿಭಾಗದ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಗಳ ದೊಮ್ಮಲೂರು ರಸ್ತೆ, ಹಲಸೂರು ಮುಖ್ಯರಸ್ತೆ, ಇಂದಿರಾನಗರ ೧೦೦ ಅಡಿ ರಸ್ತೆ, ಹಳೇ ಮದ್ರಾಸ್ ರಸ್ತೆ, ಎಂ.ಎಂ ರಸ್ತೆ, ಆಯಿಲ್ ಮಿಲ್ ರಸ್ತೆ, ಆರ್.ಎಸ್.ಪಾಳ್ಯ ರಸ್ತೆ, ಸೆಂಟ್ ಜಾನ್ಸ್ ರಸ್ತೆ, ಗೋವಿಂದಪುರ ಮುಖ್ಯರಸ್ತೆ, ರಾಮಮೂರ್ತಿನಗರ ಮುಖ್ಯರಸ್ತೆ, ಪಣತ್ತೂರು ಮುಖ್ಯರಸ್ತೆ, ಚನ್ನಸಂದ್ರ ಮುಖ್ಯರಸ್ತೆ, ಕಾಡುಗೋಡಿ ಮುಖ್ಯರಸ್ತೆ ಮತ್ತು ಐಟಿಪಿಎಲ್ ಮುಖ್ಯರಸ್ತೆಗಳಲ್ಲಿ ಅಂಗಡಿ ಮುಂಗಟ್ಟು ಇಟ್ಟುಕೊಂಡು ಪಾದಚಾರಿಗಳ ಸುಗಮ ಸಂಚಾರಕ್ಕೆ ತೊಂದರೆ ನೀಡುತ್ತಿದ್ದವರ ವಿರುದ್ಧ ಕಾರ್ಯಾಚರಣೆ ಕೈಗೊಂಡು ಅಂಗಡಿ ಮುಂಗಟ್ಟುಗಳು ಮತ್ತು ಬಿಲ್ ಬೋರ್ಡ್‌ಗಳನ್ನು ತೆರವುಗೊಳಿಸಿ ಪಾದಚಾರಿಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು. ಹಲವು ಬಾರಿ ಸೂಚನೆಗಳನ್ನು ನೀಡಿದ್ದರೂ ಸಹ ಪುನಾರಾವತಿಸಿದ ಅಂಗಡಿ ಮಾಲೀಕರುಗಳ ವಿರುದ್ಧ ಕೆ.ಪಿ.ಆಕ್ಟ್ ಅಡಿಯಲ್ಲಿ ಒಟ್ಟು ೨೬ ಪ್ರಕರಣಗಳನ್ನು ದಾಖಲು ಮಾಡಲಾಗಿದೆ. ಪಾದಚಾರಿಗಳ ಸುಗಮ ಸಂಚಾರಕ್ಕೆ ತೊಂದರೆ ಉಂಟು ಮಾಡುವವರ ವಿರುದ್ಧ ಮುಂದಿನ ದಿನಗಳಲ್ಲಿ ಕಲಂ ೧೨೬ ಬಿ.ಎನ್.ಎಸ್.ಎಸ್ ಅಡಿಯಲ್ಲಿ ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದು ಉಪ ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಆರ್. ಜೈನ್ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net