ಕಲುಷಿತ ನೀರು ಸೇವಿಸಿ 25 ಕ್ಕೂ ಹೆಚ್ಚು ಜನ‌ ಅಸ್ವಸ್ಥ, ಮೂವರ ಆರೋಗ್ಯ ಸ್ಥಿತಿ ಗಂಭೀರ

bidar polluted water
Published on

ಬೀದರ್: ಮಳೆ ಅವಾಂತರದಿಂದ ಕಲುಷಿತ ನೀರು ಸೇವಿಸಿ 25 ಕ್ಕೂ ಹೆಚ್ಚು ಜನ‌ ಅಸ್ವಸ್ಥಗೊಂಡಿದ್ದು, ಮೂವರ ಆರೋಗ್ಯ ಸ್ಥಿತಿ ಗಂಭೀರವಾದ ಘಟನೆ ನಡೆದಿದೆ.

ಬೀದರನ ಬರಿದಾಬಾದ್, ಬಕಚೌಡಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿದ 25 ಕ್ಕೂ ಹೆಚ್ಚು ಜನ ಅಸ್ವಸ್ಥ ಗೊಂಡು ಬೀದರ್​​ನ ಆಸ್ಪತ್ರೆಯಲ್ಲಿ 15 ಹಾಗೂ ಖಾಸಗಿ ಆಸ್ಪತ್ರೆಯಲ್ಲಿ 10 ಜ‌ನ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೂವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ.

ಮಳೆ ಅವಾಂತರ ಮಧ್ಯ ಜೆಜೆಎಂ ಕಾಮಗಾರಿ ಅವಾಂತರದಿಂದ ಪೈಪ್ ಲೈನ್ ಡ್ಯಾಮೇಜ್ ಆಗಿದೆ. ಬರಿದಾಬಾದ್ ಒಂದೇ ಗ್ರಾಮದಲ್ಲಿ 50 ಕ್ಕೂ ಹೆಚ್ಚು ಜನ‌ ಅಸ್ವಸ್ಥಗೊಂಡಿದ್ದಾರೆ. 25 ಜನ ಆಸ್ಪತ್ರೆಗೆ ದಾಖಲಾಗಿದ್ದು, ಉಳಿದವರು ಅಲ್ಲೇ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೀದರ್ ಬ್ರಿಮ್ಸ್ ಆಸ್ಪತ್ರೆಗೆ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಹಾಗೂ ಸಚಿವ ಈಶ್ವರ ಖಂಡ್ರೆ, ರಹೀಮ್ ಭೇಟಿ ಆರೋಗ್ಯ ವಿಚಾರಣೆ ನಡೆಸಿದ್ದಾರೆ. ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡವರು ಆರೋಗ್ಯದ ಖರ್ಚನ್ನು ಸರ್ಕಾರವೇ ಭರಿಸಬೇಕೆಂದು ಶಾಸಕ ಡಾ. ಶೈಲೇಂದ್ರ ಸರ್ಕಾರಕ್ಕೆ ಒತ್ತಾಯ ಮಾಡುವುದಾಗಿ ಹೇಳಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net