ಕಾಲ್ತುಳಿತ ದುರಂತ; 36ಕ್ಕೂ ಅಧಿಕ ಜನರು ಬಲಿ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಸಿಎಂ ಸ್ಟಾಲಿನ್

Untitled design - 2025-09-27T224915.182
Published on

ತಮಿಳುನಾಡಿನ ಕರೂರಿನಲ್ಲಿ ಶನಿವಾರ (ಸೆ.27) ನಡೆದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ ವಿಜಯ್ ಅವರ ಪ್ರಚಾರ ರ್ಯಾಲಿಯ ಸಂದರ್ಭದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 36ಕ್ಕೂ ಅಧಿಕ ಜನರು ಮೃತಪಟ್ಟಿದ್ದು, ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ತಮಿಳುನಾಡು ಸಿಎಂ ಸ್ಟಾಲಿನ್ ನ್ಯಾಯಾಂಗ ತನಿಖೆ ಆದೇಶಿಸಿದ್ದಾರೆ.

ರ್ಯಾಲಿಯಲ್ಲಿ ಸಂಭವಿಸಿದ ಕಾಲ್ತುಳಿತವನ್ನು "ತೀವ್ರ ಕಳವಳಕಾರಿ" ಎಂದು ಕರೆದಿರುವ ಸಿಎಂ, ಗಾಯಾಳುಗಳಿಗೆ ತ್ವರಿತ ವೈದ್ಯಕೀಯ ಆರೈಕೆಯನ್ನು ಖಚಿತಪಡಿಸಿಕೊಳ್ಳುವಂತೆ ಸಚಿವರು ಮತ್ತು ಜಿಲ್ಲಾ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

"ಕರೂರಿನಿಂದ ಬಂದಿರುವ ಸುದ್ದಿ ತೀವ್ರ ಕಳವಳಕಾರಿಯಾಗಿದೆ. ಜನದಟ್ಟಣೆಯಿಂದಾಗಿ ಮೂರ್ಛೆ ಹೋಗಿ ಆಸ್ಪತ್ರೆಗಳಿಗೆ ದಾಖಲಾಗಿರುವ ಸಾರ್ವಜನಿಕರಿಗೆ ತಕ್ಷಣ ವೈದ್ಯಕೀಯ ಚಿಕಿತ್ಸೆ ಒದಗಿಸುವಂತೆ ಮಾಜಿ ಸಚಿವ @V_Senthilbalaji, ಗೌರವಾನ್ವಿತ ಸಚಿವ @Subramanian_Ma ಹಾಗೂ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ" ಎಂದು ಸಿಎಂ ಸ್ಟಾಲಿನ್ ತಮ್ಮ ಎಕ್ಸ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net