ಬಿಸಿಲಿನ ತಾಪಮಾನಕ್ಕೆ ಹಜ್​ ಯಾತ್ರೆಗೆ ತೆರಳಿದ್ದ 550 ಮಂದಿ ಯಾತ್ರಿಕರು ಸಾವು

Hajj
Published on

ನವದೆಹಲಿ: ತಾಪಮಾನ ಏರಿಕೆಯಿಂದಾಗಿ ಹಜ್​ ಯಾತ್ರೆಗೆ ಮೆಕ್ಕಾಗೆ ತೆರಳಿದ್ದವರ ಪೈಕಿ 550 ಮಂದಿ ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಗರಿಷ್ಠ ಉಷ್ಣಾಂಶ 50 ಡಿಗ್ರಿ ಸೆಲ್ಸಿಯಸ್​ ದಾಟಿದೆ. ಮೃತರಲ್ಲಿ ಬಹುತೇಕರು ಈಜಿಪ್ಟಿಯನ್​ ಪ್ರಜೆಗಳು ಎಂದು ಹೇಳಲಾಗಿದೆ.

ಕನಿಷ್ಠ 60 ಯಾತ್ರಿಕರು ಬಿಸಿಲಿನ ತಾಪದಿಂದ ಸಾವನ್ನಪ್ಪಿದ್ದಾರೆ. ಪ್ರತಿ ವರ್ಷವೂ ಹಜ್ ಯಾತ್ರೆಯ ಸಮಯದಲ್ಲಿ ತಾಪಮಾನವು 40 ಡಿಗ್ರಿ ಸೆಲ್ಸಿಯೆಸ್​ನಷ್ಟಿರುತ್ತಿತ್ತು ಈ ಬಾರಿ ಭಾರಿ ಏರಿಕೆ ಕಂಡಿದೆ.

ಸೌದಿ ರಾಷ್ಟ್ರೀಯ ಹವಾಮಾನ ಕೇಂದ್ರವು ಸೋಮವಾರ ಮೆಕ್ಕಾದ ಗ್ರ್ಯಾಂಡ್ ಮಸೀದಿಯಲ್ಲಿ ತಾಪಮಾನವು 51.8 ಡಿಗ್ರಿ ಸೆಲ್ಸಿಯಸ್ (125 ಫ್ಯಾರನ್‌ಹೀಟ್) ತಲುಪಿದೆ ಎಂದು ಹೇಳಿದೆ.

ಮುಸ್ಲಿಮರ ಪವಿತ್ರ ಯಾತ್ರೆ ಎಂದೇ ಕರೆಸಿಕೊಳ್ಳುವ ಹಜ್ ಯಾತ್ರೆ ಜೂನ್​ 14ರಿಂದ ಪ್ರಾರಂಭವಾಗಿತ್ತು. ಮುಸ್ಲಿಮರ ಪವಿತ್ರ ಯಾತ್ರಾ ಸ್ಥಳ ಎಂದರೆ ಅದು ಮೆಕ್ಕಾ, ಸೌದಿ ಅರೇಬಿಯಾದ ಈ ನಗರ ಮೆಕ್ಕಾಗೆ ಹಜ್ ಯಾತ್ರೆ ಭಾಗವಾಗಿ ಸುಮಾರು 20 ಲಕ್ಷಕ್ಕೂ ಹೆಚ್ಚು ಮುಸ್ಲಿಮರು ವರ್ಷ ಭೇಟಿ ನೀಡುತ್ತಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net