ಮೊರಾಕೊ ಭೂಕಂಪ; 1,000 ಗಡಿ ದಾಟಿದ ಸಾವಿನ ಸಂಖ್ಯೆ!

Untitled design - 2023-09-09T205901.778
Published on

ಮೊರಾಕೊ: ಶುಕ್ರವಾರ (ಸೆ.08) ತಡರಾತ್ರಿ ಮೊರಾಕೊದ ಹೈ ಅಟ್ಲಾಸ್ ಪರ್ವತದಲ್ಲಿ ಸಂಭವಿಸಿದ ಪ್ರಬಲ ಭೂಕಂಪಕ್ಕೆ 1,000ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು, 12ನೇ ಶತಮಾನದ ಮರಾಕೆಚ್‌ನ ಮಸೀದಿ ಹಾನಿಯಾಗಿದೆ.

ಭೂಕಂಪದಿಂದ ಹಲವು ಕಟ್ಟಡಗಳು ನೆಲಸಮಗೊಂಡಿದ್ದು, ಜನರು ತಮ್ಮ ಮನೆಗಳಿಂದ ಪಲಾಯನ ಮಾಡಿದ್ದಾರೆ. ಘಟನೆಯಲ್ಲಿ 1,200ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಇತ್ತೀಚಿನ ವರದಿ ಉಲ್ಲೇಖಿಸಿದೆ.

ಘಟನೆಗೆ ಸ್ಪಂದಿಸಿದ ಪ್ರಧಾನಿ ನರೇಂದ್ರ ಮೋದಿ, "ಮೊರೊಕ್ಕೊದಲ್ಲಿ ಭೂಕಂಪದಿಂದಾಗಿ ಸಂಭವಿಸಿದ ಪ್ರಾಣಹಾನಿಯಿಂದ ತೀವ್ರ ನೋವಾಗಿದೆ. ಈ ದುರಂತದ ಸಮಯದಲ್ಲಿ, ನನ್ನ ಆಲೋಚನೆಗಳು ಮೊರಾಕೊದ ಜನರೊಂದಿಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ನನ್ನ ಸಂತಾಪ. ಗಾಯಾಳುಗಳು ಆದಷ್ಟು ಬೇಗ ಚೇತರಿಸಿಕೊಳ್ಳಲಿ. ಈ ಕಷ್ಟದ ಪರಿಸ್ಥಿತಿಯಲ್ಲಿ ಮೊರಾಕೊಗೆ ಸಾಧ್ಯವಾಗುವ ಎಲ್ಲಾ ನೆರವು ನೀಡಲು ಭಾರತ ಸಿದ್ಧವಾಗಿದೆ" ಎಂದು ಪ್ರಧಾನಿ ಟ್ವೀಟ್​ ಮಾಡಿ ತಿಳಿಸಿದ್ದಾರೆ,(ಏಜೆನ್ಸೀಸ್).

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net