ನದಿಗೆ ಹಾರಿ ಆ*ತ್ಮಹತ್ಯೆ ಮಾಡಿಕೊಂಡ ತಾಯಿ, ಮಗಳು! Haveri

haveri ctime
Published on

ಹಾವೇರಿ: ತಾಯಿ ಹಾಗೂ ಮಗಳು ( Haveri) ಇಬ್ಬರು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಘಟನೆ ಹಾವೇರಿ ತಾಲೂಕು ವರದಾಹಳ್ಳಿ ಗ್ರಾಮದಲ್ಲಿ ನಡೆದಿದೆ.

ಸವಿತಾ ನಾಗರಾಜ ಉಳ್ಳಾಗಡ್ಡಿ (38 ವರ್ಷ) ಹಾಗೂ ಕಾವ್ಯಾ ( 12 ವರ್ಷ) ಆತ್ಮಹತ್ಯೆ ಮಾಡಿಕೊಂಡ ತಾಯಿ ಮಗಳು. ಗಂಡನ ಮನೆಯಲ್ಲಿ ದಿನನಿತ್ಯ ಭಿನ್ನಾಭಿಪ್ರಾಯ, ಕಲಹದಿಂದ ಮನನೊಂದ ಮಹಿಳೆಯು ಮಗಳ ಸಮೇತ ವರದಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ನಿನ್ನೆ ಮದ್ಯಾಹ್ನ ಸುಮಾರು 3 ಗಂಟೆಗೆ ಮಗಳ ಸಮೇತ ವರದಾ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಾವ್ಯಾ ಮೃತದೇಹ ಈಗಾಗಲೇ ಸಿಕ್ಕಿದೆ. ಆದರೆ ತಾಯಿ ಸವಿತಾ ಮೃತದೇಹಕ್ಕಾಗಿ ಪೊಲೀಸರು ಹಾಗೂ ಅಗ್ನಿ ಶಾಮಕ ದಳದ ಸಿಬ್ಬಂದಿ ಹುಡುಕಾಟ ನಡೆಸುತ್ತಿದ್ದಾರೆ. ಇಬ್ಬರನ್ನು ಒಟ್ಟಿಗೆ ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಮೃತ ಸವಿತಾಗೆ ಮೂವರು ಮಕ್ಕಳು. ಇಬ್ಬರು ಗಂಡು ಮಕ್ಕಳು, ಓರ್ವ ಪುತ್ರಿ ಇದ್ದಾರೆ.ಇತ್ತೀಚೆಗಷ್ಟೇ ಬಾಲಕಿ ಕಾವ್ಯಾ ನವೋದಯ ಪರೀಕ್ಷೆ ಪಾಸಾಗಿದ್ದಳು, ಪ್ರತಿಭಾವಂತ ಬಾಲಕಿ ಆಗಿದ್ದಳು. ಮನೆಯಲ್ಲಿ ದಿನನಿತ್ಯ ಕಲಹ, ಭಿನ್ನಾಭಿಪ್ರಾಯ ಹಿನ್ನೆಲೆ ಮನನೊಂದಿದ್ದ ಸವಿತಾ ತಮ್ಮ ಮಗಳ ಜತೆ ಆತ್ಮಹತ್ಯೆಗೆ ಶರಣಾಗಿದ್ದಾರೆ.ಹಾವೇರಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net