

ಶಿವಮೊಗ್ಗ: ಭದ್ರಾವತಿ ತಾಲೂಕಿನ ಮೈದೊಳಲು ಮಲ್ಲಾಪುರ ಗ್ರಾಮದ ಕೆರೆಯಲ್ಲಿ ತಾಯಿ ಮತ್ತು ಇಬ್ಬರು ಮಕ್ಕಳ ಶವ ಪತ್ತೆಯಾಗಿದೆ.
ಆರು ದಿನದ ಹಿಂದೆ ಇಬ್ಬರು ಮಕ್ಕಳೊಂದಿಗೆ ನಾಪತ್ತೆಯಾಗಿದ್ದ ಮಲ್ಲಾಪುರ ಗ್ರಾಮದ ಮಂಜಮ್ಮ(30), ಇವರ ಮಕ್ಕಳಾದ ರಚನಾ, ಯಮುನಾ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
ಡಿ.18ರಂದು ಮಂಜುಳಾ ತನ್ನ ಮಕ್ಕಳೊಂದಿಗೆ ಮನೆಯಿಂದ ನಾಪತ್ತೆಯಾಗಿದ್ದರು. ಈ ಸಂಬಂಧ ಕುಟುಂಬಸ್ಥರು ಡಿ.21 ರಂದು ಹೊಳೆಹೊನ್ನೂರು ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು. ಇದನ್ನೂ ಓದಿರಿ ‘ಎಣ್ಣೆ’ ಮತ್ತಲ್ಲಿ ಬಂದ ಅಣ್ಣನಿಗೆ ಬಿಯರ್ ಬಾಟಲಿಯಲ್ಲೇ ಹಿಗ್ಗಾಮುಗ್ಗಾ ಥಳಿಸಿದ ತಂಗಿ!
ಗುರುವಾರ ಬೆಳಗ್ಗೆ ಮಲ್ಲಾಪುರ ಕೆರೆಯಲ್ಲಿ ದುರ್ವಾಸನೆ ಬರುತ್ತಿದ್ದರಿಂದ ಅನುಮಾನಗೊಂಡ ಜನರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕಾಗಮಿಸಿದ ಪೊಲೀಸರು ಕೆರೆಯಲ್ಲಿ ಹುಡುಕಾಟ ನಡೆಸಿದಾಗ ತಾಯಿ ಹಾಗೂ ಮಕ್ಕಳ ಶವ ಪತ್ತೆಯಾಗಿದೆ. ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ಮೆಗ್ಗಾನ್ ಆಸ್ಪತ್ರೆ ಶವಾಗಾರಕ್ಕೆ ರವಾನಿಸಿದರು. ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಇದಕ್ಕೆ ನಿಖರ ಕಾರಣ ಏನು ಎಂಬುದು ಪೊಲೀಸರ ತನಿಖೆಯಿಂದ ಹೊರಬರಬೇಕಿದೆ.