VIDEO | ಮನ ಬಂದಂತೆ ಮಗನಿಗೆ ಥಳಿಸಿದ ಪತ್ನಿ ವಿರುದ್ಧ ಪೊಲೀಸರಿಗೆ ದೂರು ನೀಡಿದ ಗಂಡ!

viral News
Published on

 ಹರಿಯಾಣ: ಮಹಿಳೆಯೊಬ್ಬರು ತನ್ನ 11 ವರ್ಷದ ಮಗನನ್ನು ಅಮಾನುಷವಾಗಿ ಥಳಿಸಿದ್ದಾರೆ. ಈ ವಿಚಾರವಾಗಿ ಬೇಸರಗೊಂಡ ಮಗುವಿನ ತಂದೆ, ಹೆಂಡತಿ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಘಟನೆ ಫರಿದಾಬಾದ್‌ನಲ್ಲಿ ನಡೆದಿದೆ.

ಮಹಿಳೆ ತನ್ನ ಮಗನಿಗೆ ಥಳಿಸುತ್ತಿರುವುದನ್ನು ಹಾಗೂ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಈ ಘಟನೆಗೆ ಸಂಬಂಧಿಸಿದ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಕೆಲಸದಿಂದ ಸಂಜೆ ಮನೆಗೆ ಬಂದ ಪತಿ ಸಿಸಿಟಿವಿ ದೃಶ್ಯ ಕಂಡು ಬೆಚ್ಚಿ ಬಿದ್ದಿದ್ದಾನೆ. ಇಂತಹ ಅಮಾನುಷ ಕೃತ್ಯಗೈದ ಪತ್ನಿಯ ವಿರುದ್ಧ ಸ್ಥಳೀಯ ಪೊಲೀಸ್​ ಠಾಣೆಯಲ್ಲಿ ದೂರು ನೀಡಿದ್ದಾನೆ.

ವಿಡಿಯೋದಲ್ಲಿ ಏನಿದೆ?: ಮಹಿಳೆ ತನ್ನ ಮಗುವಿಗೆ ಒದೆಯುವುದು ಕೂಡ ಕಂಡುಬಂದಿದೆ. ಹಲ್ಲೆಯ ಸಂದರ್ಭದಲ್ಲಿ ಮಗುವಿನ ತಂದೆ ಮಧ್ಯಪ್ರವೇಶಿಸಿ ಮಗುವನ್ನು ತನ್ನ ಕ್ರೂರ ತಾಯಿಯಿಂದ ರಕ್ಷಿಸಿದ ದೃಶ್ಯಾವಳಿಗಳು ಸಹ ಸೆರೆಯಾಗಿದೆ.

ಮಕ್ಕಳ ಕಲ್ಯಾಣ ಸಮಿತಿಯ ಆದೇಶದ ಮೇರೆಗೆ ಸೂರಜ್‌ಕುಂಡ್ ಪೊಲೀಸ್ ಠಾಣೆಯು ತಾಯಿಯ ವಿರುದ್ಧ ಕ್ರೌರ್ಯ ಪ್ರಕರಣವನ್ನು ದಾಖಲಿಸಿದೆ. ಪ್ರಕರಣ ದಾಖಲಾದ ಬಳಿಕ ಮಹಿಳೆ ತನ್ನ ಮಗನನ್ನು ಕರೆದುಕೊಂಡು ತಾಯಿ ಮನೆಗೆ ಹೋಗಿದ್ದಾಳೆ ಎನ್ನಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net