11ವರ್ಷದ ಮಗಳನ್ನು ಹತ್ಯೆ ಮಾಡಿ ಬಳಿಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ತಾಯಿ

Suicide 6 Jan 20
Published on

ಮಂಡ್ಯ: ತಾಯಿ ತನ್ನ 11 ವರ್ಷದ ಮಗಳನ್ನು ಹತ್ಯೆ ಮಾಡಿ ಬಳಿಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಪಾಂಡವಪುರ ತಾಲೂಕಿನ ಮೇಲುಕೋಟೆಯಲ್ಲಿ ನಡೆದಿದೆ.

ಶಾಂತಿ (26) ಮೃತ ಮಹಿಳೆ. ಮಗಳು ಕೌಶಲ್ಯಾಳನ್ನು ಕೊಂದ ಬಳಿಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆರು ವರ್ಷಗಳ ಹಿಂದೆಯೇ ಶಾಂತಿಯ ಪತಿ ಅನಾರೋಗ್ಯಕ್ಕೆ ತುತ್ತಾಗಿ ಮೃತಪಟ್ಟಿದ್ದರು. ಶಾಂತಿ ಅವರು ಆಗಿನಿಂದಲೂ ಕೂಲಿ ಮಾಡಿ ಜೀವನ ಸಾಗಿಸುತ್ತಿದ್ದರು.

ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದ್ದು ಮೇಲುಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net