ಚಿತ್ರದ ಶೀರ್ಷಿಕೆ ಅನಾವರಣ; ‘ಮೈಸಾ’ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ಉಗ್ರ ರೂಪ; Rashmika Mandanna

rashmika
Published on

ರಶ್ಮಿಕಾ ಮಂದಣ್ಣ ಅವರು ‘ಮೈಸಾ’ ಎಂಬ ಹೊಸ ಪ್ಯಾನ್ ಇಂಡಿಯಾ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ಅವರ ಪಾತ್ರ ಮತ್ತು ಲುಕ್ ಸಂಪೂರ್ಣವಾಗಿ ಭಿನ್ನವಾಗಿದೆ. ರೊಮ್ಯಾಂಟಿಕ್ ಪಾತ್ರಗಳಿಂದ ದೂರ ಸರಿದು, ಒಂದು ಮಹಿಳಾ ಪ್ರಧಾನ ಪಾತ್ರದಲ್ಲಿ ಅವರು ಕಾಣಿಸಿಕೊಳ್ಳಲಿದ್ದಾರೆ. ತೆಲುಗು, ಕನ್ನಡ, ಹಿಂದಿ, ತಮಿಳು ಮತ್ತು ಮಲಯಾಳಂ ಭಾಷೆಗಳಲ್ಲಿ ಈ ಚಿತ್ರ ಬಿಡುಗಡೆಯಾಗಲಿದೆ.

Rashmika Mandanna| ಪುಷ್ಪ ಸಿನಿಮಾ ಖ್ಯಾತಿಯ ನಟಿ ರಶ್ಮಿಕಾ ಮಂದಣ್ಣ ಅವರ ಮುಂಬರುವ ಚಿತ್ರದ ಶೀರ್ಷಿಕೆಯನ್ನು ಇಂದು (27) ನಿರ್ಮಾಪಕರು ಅಧಿಕೃತವಾಗಿ ಅನಾವರಣಗೊಳಿಸಿದ್ದಾರೆ. ಈ ಸಿನಿಮಾಗೆ 'ಮೈಸಾ' ಎಂದು ಹೆಸರಿಡಲಾಗಿದೆ.

ರಶ್ಮಿಕಾ ಮಂದಣ್ಣ ರೊಮ್ಯಾಂಟಿಕ್ ಚಿತ್ರಗಳ ಮೂಲಕ ಹೆಚ್ಚು ಇಷ್ಟ ಆಗುತ್ತಾರೆ. ಅವರು ಇತ್ತೀಚೆಗೆ ನಟನೆಯಲ್ಲಿ ಪಳಗಿದ್ದಾರೆ. ಹೀಗಾಗಿ, ವಿವಿಧ ರೀತಿಯ ಆಫರ್​ಗಳು ಅವರನ್ನು ಹುಡುಕಿ ಬರುತ್ತಿವೆ. ಈಗ ಮಹಿಳಾ ಪ್ರಧಾನ ಸಿನಿಮಾ ಒಂದನ್ನು ಅವರು ಒಪ್ಪಿಕೊಂಡಿದ್ದಾರೆ. ಈ ಚಿತ್ರಕ್ಕೆ ‘ಮೈಸಾ’ ಎಂಬ ಟೈಟಲ್ ಇಡಲಾಗಿದೆ. ಅವರ ಲುಕ್ ಭಿನ್ನವಾಗಿದ್ದು, ಈ ಶೀರ್ಷಿಕೆ ಗಮನ ಸೆಳೆಯುವಂತಿದೆ. ಸಿನಿಮಾಗೆ ರವೀಂದ್ರ ಪುಲ್ಲೇ ನಿರ್ದೇಶನ ಮಾಡುತ್ತಿದ್ದಾರೆ. ಅಜಯ್ ಹಾಗೂ ಅನಿಲ್ ಸಯ್ಯಾಪುರೆಡ್ಡಿ ಎಂಬುವವರು ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ.

ಟೈಟಲ್ ರಿವೀಲ್ ಪೋಸ್ಟರ್‌ನಲ್ಲಿ, ರಶ್ಮಿಕಾಳನ್ನು ಉಗ್ರ ನೋಟದಲ್ಲಿ, ಮುಖದ ಮೇಲೆ ರಕ್ತದ ಕಲೆಗಳೊಂದಿಗೆ ಕಾಣಬಹುದು. ಅವರು ಸೀರೆಯಲ್ಲಿ ಮತ್ತು ಬುಡಕಟ್ಟು ಮಹಿಳೆಯ ವೇಷದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಟೈಟಲ್ ರಿವೀಲ್ ಪೋಸ್ಟರ್‌ಗೆ ಸಾಮಾಜಿಕ ಮಾಧ್ಯಮ ಬಳಕೆದಾರರು ತ್ವರಿತವಾಗಿ ಪ್ರತಿಕ್ರಿಯಿಸಿದ್ದು, ಒಬ್ಬ ಬಳಕೆದಾರರು, ರಶ್ಮಿಕಾ ಬೆಂಕಿಯನ್ನು ಉಸಿರಾಡುತ್ತಿದ್ದಾರೆ, ಈ ಸಿನಿಮಾ ಪಕ್ಕಾ ಬ್ಲಾಕ್‌ಬಸ್ಟರ್ ಆಗಲಿದೆ ಎಂದು ಬರೆದಿದ್ದಾರೆ. ಇನ್ನೊಬ್ಬ ಬಳಕೆದಾರರು, ಸೂಪರ್ ಹಿಟ್ ಹೋಗಿ ಮಾಮ್"ಎಂದು ಬರೆದಿದ್ದಾರೆ.

(ಏಜೆನ್ಸೀಸ್)

ಇಂದು ಮುಂಜಾನೆ ರಶ್ಮಿಕಾ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ತಮ್ಮ ಮುಂಬರುವ ಚಿತ್ರದ ಮೊದಲ ನೋಟವನ್ನು ಹಂಚಿಕೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net