ಲೋಕಸಭೆ ಟಿಕೆಟ್‌ಗೆ ಬೇಡಿಕೆ ಹೆಚ್ಚಳ:ಹಿಟ್ನಾಳ್

MP TICKET MLA HITNAL
MP TICKET MLA HITNAL
ರಾಘವೇಂದ್ರ ಹಿಟ್ನಾಳ್
Published on

ಕೊಪ್ಪಳ: ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಇಂಡಿಯಾ ಒಕ್ಕೂಟ ಒಟ್ಟಾಗಿ ಚುನಾವಣೆ ಎದುರಿಸಲಿವೆ. ಹೀಗಾಗಿ ಟಿಕೆಟ್‌ಗೆ ಬೇಡಿಕೆ ಹೆಚ್ಚಿದೆ. ಕೊಪ್ಪಳ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ನಮ್ಮ ಕುಟುಂಬಕ್ಕೆ ನೀಡುವಂತೆ ಕೇಳುತ್ತೇವೆ ಎಂದು ಶಾಸಕ ರಾಘವೇಂದ್ರ ಹಿಟ್ನಾಳ್ ಹೇಳಿದರು.

ನಗರದಲ್ಲಿ ಶುಕ್ರವಾರ ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದರು.

ನನ್ನ ಸಹೋದರ ರಾಜಶೇಖರ್ ಹಿಟ್ನಾಳ್ ಕಳೆದ ಬಾರಿ ಲೋಕಸಭೆಗೆ ಸ್ಪರ್ಧಿಸಿ ಕಡಿಮೆ ಅಂತರದಿಂದ ಸೋತಿದ್ದಾರೆ. ಮಾಜಿ ಶಾಸಕ ಅಮರೇಗೌಡ ಬಯ್ಯಪುರ ಅವರು ನಮ್ಮ ಪಕ್ಷದ ಹಿರಿಯರು. ಟಿಕೆಟ್ ಕೇಳಿದ್ದಾರೆ. ನಾವೂ ಟಿಕೆಟ್ ನೀಡುವಂತೆ ಕೇಳಿಕೊಳ್ಳುತ್ತೇವೆ. ಅಂತಿಮವಾಗಿ ಹೈ ಕಮಾಂಡ್ ಯಾರಿಗೆ ಟಿಕೆಟ್ ಎಂದು ನಿರ್ಧರಿಸಲಿದೆ. ಯಾರಿಗೆ ಟಿಕೆಟ್ ಸಿಕ್ಕರೂ ಅವರ ಪರವಾಗಿ ಕೆಲಸ ಮಾಡುತ್ತೇವೆ ಎಂದರು.

ಚೈತ್ರಾ ಕುಂದಾಪುರ ವಂಚನೆ ಆರೋಪದಲ್ಲಿ ಬಂಧಿಯಾಗಿದ್ದಾಳೆ. ಆರ್‌ಎಸ್‌ಎಸ್ ಹಿನ್ನೆಲೆಯಿಂದ ಬಂದವರೇ ಹಣ ಹೊಡೆದಿದ್ದಾರೆ ಎಂದರೆ ಹೇಗೆ ? ಪ್ರಚೊದನಕಾರಿಯಾಗಿ ಮಾತನಾಡುವವರಿಗೆ ಬಿಜೆಪಿ ಮಣೆ ಹಾಕುತ್ತದೆ. ಮುಂದೆ ಇನ್ನಷ್ಟು ವಂಚನೆ ಬಯಲಿಗೆ ಬರಲಿದೆ ಎಂದು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net