ಎಂ.ಎಸ್.ರಾಮಯ್ಯ ಕಾಲೇಜಿನಲ್ಲಿ ಕಾರ್ಯಕ್ರಮ ವಿದ್ಯಾರ್ಥಿಗಳು ಕೌಶಲ್ಯವನ್ನು ಅಭಿವೃದ್ಧಿಪಡಿಸಿಕೊಳ್ಳಲು ಕರೆ

Published on

ಬೆಂಗಳೂರು:
ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಉನ್ನತಿಯ ಜೊತೆಗೆ ಇತರರೊಂದಿಗೆ ಹೇಗೆ ವ್ಯವಹರಿಸಬೇಕು ಎಂಬ ಕೌಶಲ್ಯವನ್ನು ಅಭಿವೃದ್ಧಿಪಡಿಸಿಕೊಳ್ಳಬೇಕು ಎಂದು ಎಸ್‌ಎಲ್‌ಕೆ ಗ್ರೂಪ್‌ನ ಚ್ೀ ಪೀಪಲ್ ಆಫೀಸರ್ ಧೀರೇಂದ್ರನಾಥ್ ಹೇಳಿದ್ದಾರೆ.
ಎಂ.ಎಸ್.ರಾಮಯ್ಯ ಆನ್ವಯಿಕ ವಿಜ್ಞಾನ ವಿಶ್ವವಿದ್ಯಾಲಯ(್ಕಖಿಅಖ)ದ ದೀಕ್ಷಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿ, ಇಂದಿನ ಕ್ರಿಯಾತ್ಮಕ ಉದ್ಯಮದ ವಾತಾವರಣದಲ್ಲಿ ಯಶಸ್ವಿ ವೃತ್ತಿಜೀವನಕ್ಕಾಗಿ ವ್ಯಕ್ತಿತ್ವ ವಿಕಸನದ ಮಹತ್ವ ಮುಖ್ಯವಾಗಿದೆ ಎಂದರು.
ಆರ್‌ಯುಎಎಸ್‌ನಲ್ಲಿ ಆರೋಗ್ಯ ವಿಜ್ಞಾನಗಳ ವಿಭಾಗದ ಪ್ರೊ ವೈಸ್ ಚಾನ್ಸೆಲರ್ ಡಾ ಓಂ
ಪ್ರಕಾಶ್ ಖರಬಂದ ಅವರು ವಿದ್ಯಾರ್ಥಿಗಳನ್ನು ಅಭಿನಂದಿಸಿ, ಕೌಶಲವನ್ನು ಹೆಚ್ಚಿಸಿಕೊಳ್ಳುವುದು ಮತ್ತು ಜೀವನವಿಡೀ ಕಲಿಯುತ್ತಾ ಮುಂದುವರಿಯುವ ಮಹತ್ವವನ್ನು ಒತ್ತಿ ಹೇಳಿದರು.
ಅಧ್ಯತೆ ವಹಿಸಿದ್ದ ಆರ್‌ಯುಎಎಸ್ ಉಪಕುಲಪತಿ ಪ್ರೊ. ಕುಲದೀಪ್ ಕುಮಾರ್ ರೈನಾ, ವಿದ್ಯಾರ್ಥಿಗಳು ಬಹುಶಿಸ್ತೀಯ ವಿಧಾನವನ್ನು ಅಳವಡಿಸಿಕೊಳ್ಳಬೇಕು ಮತ್ತು ವಿಶ್ವವಿದ್ಯಾನಿಲಯವು ಒದಗಿಸುವ ವಿವಿಧ ಅವಕಾಶಗಳ ಸಂಪೂರ್ಣ ಪ್ರಯೋಜನವನ್ನು ಪಡೆದುಕೊಳ್ಳಿ ಎಂದರು.
ಬಿ.ಟೆಕ್., ಹೊಸ ಬ್ಯಾಚ್ ವಿದ್ಯಾರ್ಥಿಗಳ ಸ್ವಾಗತ ಸಮಾರಂಭದಲ್ಲಿ ವಿದ್ಯಾರ್ಥಿಗಳು ಮತ್ತು ಪೋಷಕರು ಸೇರಿದಂತೆ ಸುಮಾರು 1,500 ಜನರು ಭಾಗವಹಿಸಿದ್ದರು.
ಸಹಾಯಕ ಪ್ರಾಧ್ಯಾಪಕರಾದ ಸಹನಾ ಪಿ. ಶಂಕರ್ ಕಾರ್ಯಕ್ರಮ ನಿರ್ವಹಿಸಿದರು. ವಿದ್ಯಾರ್ಥಿ ಶಿಶಿರ್ ಕೆ ಪಿ ಅವರ ಗೀತೆಯೊಂದಿಗೆ ಕಾರ್ಯಕ್ರಮ ಚಾಲನೆ ಪಡೆಯಿತು. ಪ್ರೊ.ಗೋವಿಂದ ಆರ್. ಕಡಂಬಿ ಸ್ವಾಗತಿಸಿದರು. ಡೀನ್ ಡಾ.ನಯನಾ ಎನ್.ಪಾಟೀಲ್ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net