ಮುಡಾ ತೀರ್ಪಿನ ಹಿನ್ನೆಲೆಯಲ್ಲಿ ಬಿರುಸಾದ ಚಟುವಟಿಕೆ

bjp
Published on

ಬೆಂಗಳೂರು:
ಮುಡಾ ಪ್ರಕರಣದಲ್ಲಿ ಹೈಕೋರ್ಟ್ ತೀರ್ಪಿನ ಬಳಿಕ ಕಮಲ ಪಾಳೇಯದಲ್ಲಿ ರಾಜಕೀಯ ಚಟುವಟಿಕೆ ಬಿರುಸಾಗಿದೆ.
ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ಮಾಡಿದ್ದು ಜೋಷ್‌ನಲ್ಲಿದ್ದ ಬಿಜೆಪಿಗೆ ತಮ್ಮದೇ ಪಕ್ಷದ ಆಂತರಿಕ ಬೇಗುದಿ ಕಾರಣಕ್ಕೆ ಮಂಕು ಕವಿದಂತಾಗಿತ್ತು. ಹೈಕೋರ್ಟ್ ತೀರ್ಪು ಹೊರ ಬಿದ್ದ ಬೆನ್ನಲ್ಲಿಯೇ ಬಿಜೆಪಿ ಇನ್ನಷ್ಟು ಹುಮ್ಮಸ್ಸಿನಿಂದ ಹೊಸ ಹೋರಾಟಕ್ಕೆ ಅಣಿಯಾಗುತ್ತಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಆಗ್ರಹಿಸಿ ಹೋರಾಟ ಮಾಡುತ್ತಿದ್ದರೂ, ಯಾವುದು ಸರಿ? ಯಾವುದು ತಪ್ಪು? ಎನ್ನುವ ಗೊಂದಲಗಳು ಪಕ್ಷದೊಳಗೂ ಮನೆ ಮಾಡಿದ್ದವು. ಆದರೆ, ವಿರೋಧ ಪಕ್ಷವಾಗಿ ಹೋರಾಟ ಮಾಡಬೇಕಾದ ಜವಬ್ದಾರಿಯನ್ನು ಬಿಜೆಪಿ ಮಾಡಿತ್ತು.
ಮೂಡಾ ಪ್ರಕರಣದಲ್ಲಿ ಹೊರಬಿದ್ದಿರುವ ತೀರ್ಪು, ಬಿಜೆಪಿ ಹೋರಾಟಕ್ಕೆ ಸಂದ ಜಯ ಎಂದು ಬಣ್ಣಿಸಿಕೊಳ್ಳಲಾಗುತ್ತಿದೆ.
ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ತಮ್ಮ ಇಮೇಜ್ ಹೆಚ್ಚಿಸಿಕೊಳ್ಳಲು ಪಾದಯಾತ್ರೆ ಮಾಡುತ್ತಿದ್ದಾರೆ ಎಂದು ಟೀಕೆ ಮಾಡಿದ್ದ ತಮ್ಮದೇ ಪಕ್ಷದ ಕೆಲ ನಾಯಕರು ಕೂಡ ಈಗ ಮೌನಕ್ಕೆ ಶರಣಾಗಿದ್ದಾರೆ.
ಪಕ್ಷದ ಅಧ್ಯಕ್ಷ ವಿಜಯೇಂದ್ರ ಅವರ ನೇತೃತ್ವದಲ್ಲಿ ಇನ್ನಷ್ಟು ಹುರುಪಿನಿಂದ ಹೋರಾಟ ಮಾಡಲಾಗುವುದು. ಅಗತ್ಯವಿದ್ದರೆ ಇನ್ನಷ್ಟು ಆಕ್ರಮಣಕಾರಿಯಾಗಿ ಹೋರಾಟ ಮಾಡಲು ಪಕ್ಷ ಮುಂದಾಗಲಿದೆ. ಹಿರಿಯ ನಾಯಕರ ಜೊತೆಗೂ ಸಭೆ ನಡೆಸಲಾಗುವುದು ಎಂದು ಮೂಲಗಳು ಖಚಿತಪಡಿಸಿವೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net