ಮುಡಾ ಪ್ರಕರಣ; ಸಿಎಂ ಸಿದ್ದರಾಮಯ್ಯ ಪತ್ನಿಗೆ ನೋಟಿಸ್ ಜಾರಿ ಮಾಡುವಂತೆ ಹೈಕೋರ್ಟ್ ಆದೇಶ| muda-case

CM Siddaramaiah (7)
Published on

ಬೆಂಗಳೂರು : ಮುಡಾದಲ್ಲಿ ಅಕ್ರಮ ಸೈಟು ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಇಂದು (10) ಸಿಎಂ ಸಿದ್ದರಾಮಯ್ಯ ಪತ್ನಿಗೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶ ಹೊರಡಿಸಿದೆ.

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ರಾಜ್ಯಪಾಲರ ಅನುಮತಿ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನ ಹೈಕೋರ್ಟ್ ವಿಭಾಗೀಯ ಪೀಠ ಇಂದು ವಿಚಾರಣೆ ನಡೆಸಿತು. ಸಿಬಿಐ ತನಿಖೆ ಕೋರಿ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಮೇಲ್ಮನವಿಯನ್ನು ಹೈಕೋರ್ಟ್ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಈ ಮಧ್ಯೆ ಸಿದ್ದರಾಮಯ್ಯ ಪತ್ನಿಗೆ ನೋಟಿಸ್ ಜಾರಿಯಾಗದ ಹಿನ್ನೆಲೆಯಲ್ಲಿ ನೋಟಿಸ್ ಜಾರಿಗೊಳಿಸಲು ಆದೇಶಿಸಿತು.

(ಏಜೆನ್ಸೀಸ್)

ಸಿಎಂ ಸಿದ್ದರಾಮಯ್ಯ ಅವರ ಪತ್ನಿಗೆ ನೋಟಿಸ್ ಜಾರಿಯಾಗದ ಹಿನ್ನೆಲೆಯಲ್ಲಿ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶ ಹೊರಡಿಸಿದೆ. ನೋಟಿಸ್ ಜಾರಿಯಾಗದ ಪ್ರತಿವಾದಿಗಳಿಗೆ ನೋಟಿಸ್ ನೀಡಲು ನ್ಯಾ. ವಿ.ಕಾಮೇಶ್ವರ ರಾವ್ ಹಾಗೂ ಸಿ.ಎಂ.ಜೋಶಿ ಅವರಿದ್ದ ಪೀಠ ಸೂಚನೆ ನೀಡಿದೆ. ವಿಭಾಗೀಯ ಪೀಠ ಅರ್ಜಿ ವಿಚಾರಣೆಯನ್ನು ಸೆಪ್ಟೆಂಬರ್ 4ಕ್ಕೆ ಮುಂದೂಡಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net