Muda ಹಗರಣ; ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿಗೆ ಕ್ಲೀನ್​ಚಿಟ್ ನೀಡಿದ ಲೋಕಾಯುಕ್ತ!

CM Siddaramaiah
Published on

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (MUDA) ಸೈಟು ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ನಡೆಸಿದ್ದ ತನಿಖೆಯು ಮುಕ್ತಾಯಗೊಂಡಿದ್ದು, ಸಾಕ್ಷಾೃಧಾರ ಕೊರತೆಯಿಂದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಪತ್ನಿ ಪಾರ್ವತಿಗೆ ಲೋಕಾಯುಕ್ತ ಪೊಲೀಸರು ಕ್ಲೀನ್​ಚಿಟ್ ನೀಡಿದ್ಧಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ ಸೇರಿದಂತೆ ಇತರರ ವಿರುದ್ಧ ಸಾಮಾಜಿ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ನೀಡಿದ್ದ ದೂರಿನಲ್ಲಿ ಸಾಕ್ಷಾೃಧಾರ ಕೊರತೆ ಇದೆ. ಹಾಗಾಗಿ ಇದು ತನಿಖೆಗೆ ಅರ್ಹವಲ್ಲದ ಪ್ರಕರಣ ಎಂದು ಲೋಕಾಯುಕ್ತ ಪೊಲೀಸರು ಅಭಿಪ್ರಾಯಪಟ್ಟಿದ್ದಾರೆ.

ಈ ಕುರಿತು ಸ್ನೇಹಮಯಿ ಕೃಷ್ಣ ಅವರಿಗೆ ಹಿಂಬರಹದ ನೋಟಿಸ್ ನೀಡಿರುವ ಲೋಕಾಯುಕ್ತ ಪೊಲೀಸರು, ತಾವು ನೀಡಿರುವ ದೂರಿನಲ್ಲಿ ಸಾಕ್ಷಾೃಧಾರಗಳ ಕೊರತೆ ಇದೆ. ಇದನ್ನು ನ್ಯಾಯಾಲಯಕ್ಕೂ ಸಲ್ಲಿಸಲಿದ್ದು, ಈ ವರದಿಯನ್ನು ವಿರೋಧಿಸುದಿದ್ದರೆ ನೋಟಿಸ್ ತಲುಪಿದ ಒಂದು ವಾರದೊಳಗೆ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ವಿರೋಧಿಸಬಹುದು ಎಂದು ತಿಳಿಸಲಾಗಿದೆ.

ಇದರಿಂದ ರಾಜ್ಯ ಅಲ್ಲದೇ ರಾಷ್ಟ್ರಮಟ್ಟದಲ್ಲಿಯೂ ಸದ್ದು ಮಾಡಿದ್ದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (MUDA) ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಪತ್ನಿ ಪಾರ್ವತಿ, ಬಾಮೈದುನ ಮಲ್ಲಿಕಾರ್ಜುನಸ್ವಾಮಿ ಸೇರಿದಂತೆ ಇತರರಿಗೆ ನಿರಾಳತೆ ಸಿಕ್ಕಂತಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net