

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ) ಬದಲಿ ನಿವೇಶನ ಹಂಚಿಕೆ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿಯ ಮುಂದುವರಿದ ವಿಚಾರಣೆ ಸೋಮವಾರ ಹೈಕೋರ್ಟ್‌ನಲ್ಲಿ ನಡೆಯಲಿದೆ.
ನ್ಯಾ.ಎಂ. ನಾಗಪ್ರಸನ್ನ ನೇತೃತ್ವದ ಏಕಸದಸ್ಯ ಪೀಠದಲ್ಲಿ ಈಗಾಗಲೇ ಮೂರು ಬೇರೆ ಬೇರೆ ದಿನ ವಿಚಾರಣೆ ನಡೆದಿದೆ. ಕೋರ್ಟ್ ವಾದ-ಪ್ರತಿವಾದ ಆಲಿಸಿದೆ. ಸೋಮವಾರ ಮತ್ತೆ ವಿಚಾರಣೆ ಮುಂದುವರಿಯಲಿದೆ.
ಕಳೆದ ಒಂದು ತಿಂಗಳಿಂದ ಸದ್ದು ಮಾಡುತ್ತಿರುವ ಮುಡಾ ಹಗರಣ ವಿಚಾರಣೆ ಕ್ಲೈಮ್ಯಾಕ್ಸ್ ಹಂತಕ್ಕೆ ಬಂದಿದ್ದು, ಸೋಮವಾರ ಸರ್ಕಾರದ ಪರ ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ವಾದ ಮಂಡಸಲಿದ್ದಾರೆ. ಈ ವಿಚಾರಣೆ ಕುತೂಹಲ ಮೂಡಿಸಿದೆ.