ಮುಡಾ ಪ್ರಕರಣ; ಮನಸೋ ಇಚ್ಛೆ ಹೇಳಿಕೆ ನೀಡದಿರಲು ತಾಕೀತು

bjp
Published on

ಬೆಂಗಳೂರು:
ಮುಡಾ ಪ್ರಕರಣದಲ್ಲಿ ರಾಜ್ಯಪಾಲರು, ಮುಖ್ಯಮಂತ್ರಿಗಳಿಗೆ ಶೋಕಾಸ್ ನೋಟೀಸ್ ನೀಡಿರುವ ವಿಷಯದಲ್ಲಿ ಎಚ್ಚರಿಕೆಯಿಂದ ನಡೆದುಕೊಳ್ಳುವಂತೆ ಹೈಕಮಾಂಡ್ ಬಿಜೆಪಿ ನಾಯಕರಿಗೆ ತಾಕೀತು ಮಾಡಿದೆ.
ರಾಜಕೀಯ ಸಂಕ್ರಮಣ ಕಾಲಘಟ್ಟದಲ್ಲಿ ಪ್ರತಿ ಹೇಳಿಕೆಗೂ ಮಹತ್ವ ಬರುತ್ತದೆ. ಆದ್ದರಿಂದ ವರಿಷ್ಠರ ಸೂಚನೆಗಳನ್ನು ದಾಟಿ ಮಾಧ್ಯಮದ ಮುಂದೆ ಹೇಳಿಕೆ ನೀಡಬಾರದು. ಜವಬ್ದಾರಿ ಹೊತ್ತಿರುವ ಬಿಜೆಪಿ ಪ್ರಮುಖ ನಾಯಕರನ್ನು ಹೊರತುಪಡಿಸಿ ಇನ್ನುಳಿದವರು ಮಾಧ್ಯಮದ ಎದುರು ಹೋಗಬಾರದು ಎಂದು ತಿಳಿಸಲಾಗಿದೆ ಎಂದು ಮೂಲಗಳು ಖಚಿತಪಡಿಸಿವೆ.
ಮುಡಾ ಹಗರಣದ ಬಗ್ಗೆ ಬಿಜೆಪಿ ಸದನದ ಒಳಗೆ ಎಲ್ಲಾ ವಿಷಯ ಪ್ರಸ್ತಾಪಿಸಲು ಉದ್ದೇಶಿಸಿತ್ತು. ಆದರೆ ಅದಕ್ಕೆ ಅವಕಾಶ ನೀಡದ ಹಿನ್ನೆಲೆಯಲ್ಲಿ ಪಾದಯಾತ್ರೆ ಮಾಡಲಾಗುತ್ತಿದೆ. ಯಾವ ಕಾರಣಕ್ಕಾಗಿ ಬಿಜೆಪಿ ಹೋರಾಟ ನಡೆಸುತ್ತಿದೆ ಎನ್ನುವುದು ಜನ ಸಾಮಾನ್ಯರಿಗೂ ಮನವರಿಕೆ ಆಗಬೇಕು ಎಂದು ಸಲಹೆಗಳನ್ನು ನೀಡಲಾಗಿದೆ.
ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಾಹಂ ನೀಡಿರುವ ದೂರಿನ ಹಿನ್ನೆಲೆಯಲ್ಲಿ ರಾಜ್ಯಪಾಲರು, ಸಿಎಂ ಸಿದ್ದರಾಮಯ್ಯ ಅವರಿಗೆ ನೋಟೀಸ್ ನೀಡಿದ್ದಾರೆ ಎನ್ನುವುದನ್ನು ಗಮನಿಸಬೇಕು. ಅಲ್ಲದೆ,
ಮಾಧ್ಯಮಗಳ ಮುಂದೆ ಮನಸೋ ಇಚ್ಛೆ ಹೇಳಿಕೆಗಳನ್ನು ನೀಡಬಾರದು ಎಂದು ತಾಕೀತು ಮಾಡಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net