ಮುಡಾ ಅಧ್ಯಕ್ಷ ಸ್ಥಾನಕ್ಕೆ ಮರೀಗೌಡ ರಾಜೀನಾಮೆ

marigowda feels sad
Published on

ಬೆಂಗಳೂರು:
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಅಧ್ಯಕ್ಷ ಸ್ಥಾನಕ್ಕೆ ಕೆ.ಮರೀಗೌಡ ಅವರು ರಾಜೀನಾಮೆ ನೀಡಿದ್ದಾರೆ.
ವಿಕಾಸಸೌಧದಲ್ಲಿರುವ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ದೀಪ ಚೋಳನ್ ಅವರನ್ನು ಖುದ್ದಾಗಿ ಭೇಟಿ ಮಾಡಿದ ಮರೀಗೌಡರು ರಾಜೀನಾಮೆ ಸಲ್ಲಿಸಿದ್ದಾರೆ.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ರಾಜೀನಾಮೆ ನೀಡುವಂತೆ ನನಗೆ ಯಾರೂ ಒತ್ತಡ ಹಾಕಿಲ್ಲ. ಆದರೆ, ನಿಸ್ಪಕ್ಷಪಾತವಾಗಿ ತನಿಖೆ ನಡೆಯಲಿ ಎನ್ನುವ ಕಾರಣಕ್ಕಾಗಿ ಸ್ವಚ್ಛೆಯಿಂದ ರಾಜೀನಾಮೆ ನೀಡಿದ್ದೇನೆ ಎಂದರು.
ಮೂಡಾದಲ್ಲಿ ಅಕ್ರಮವಾಗಿಲ್ಲ. ತನಿಖೆ ನಡೆದು ವರದಿ ಬರಲಿ. ಆಮೇಲೆ ಎಲ್ಲವೂ ಗೊತ್ತಾಗುತ್ತದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಸಿದ್ದರಾಮಯ್ಯ ಅವರು ನಮ್ಮ ನಾಯಕರು. ಕಳೆದ 40 ವರ್ಷದಿಂದ ಅವರ ಜೊತೆಯಲ್ಲಿದ್ದೇನೆ. ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ ಸೇರಿದಂತೆ ಮೂಡಾ ಅಧ್ಯಕ್ಷ ಸ್ಥಾನದ ತನಕ ನಾನು ಅಧಿಕಾರ ಅನುಭವಿಸಿದ್ದೇನೆ. ಎಲ್ಲಿಯೂ ಅವರಿಗೆ ಕೆಟ್ಟ ಹೆಸರು ತರುವ ಕೆಲಸ ಮಾಡಿಲ್ಲ ಎಂದರು.
ನನಗೆ ಆರೋಗ್ಯ ಸರಿಯಿಲ್ಲ. 2 ಬಾರಿ ಸ್ಟ್ರೋಕ್ ಆಗಿದ್ದು, ಸಮಸ್ಯೆಯಾಗಿದೆ. ಆದ್ದರಿಂದ ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿಯುವುದು ಇಷ್ಟವಿಲ್ಲ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net