ಮುಡಾ ಹಗರಣ : ನ್ಯಾಯಾಂಗ ತನಿಖೆಗೆ ಆಗ್ರಹಿಸಿ ರಾಜ್ಯಪಾಲರಿಗೆ ರೈತ ಮುಖಂಡರಿಂದ ಮನವಿ

kurubooru
Published on

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಹಗರಣದ ಹೈಕೋರ್ಟ್ ನ್ಯಾಯಮೂರ್ತಿ ಅವರಿಂದ ತನಿಖೆ ನಡೆಸಬೇಕು ಎಂದು ಒತ್ತಾಯಿಸಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟದಿಂದ ರಾಜ್ಯಪಾಲ ತಾವರ್‌ಚಂದ್ ಗೆಹ್ಲೋಟ್‌ಗೆ ಶನಿವಾರ ಮನವಿ ಪತ್ರ ಸಲ್ಲಿಸಲಾಯಿತು.

ಕಳೆದ ವರ್ಷ ಮುಡಾ ಕಚೇರಿಯಲ್ಲಿನ ದಾಖಲಾತಿಗಳು ನಾಪತ್ತೆಯಾಗಿತ್ತು. ಆ ಸಂದರ್ಭದಲ್ಲಿಯೇ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಂಡಿದ್ದರೆ ಮುಡಾದಲ್ಲಿ ಸಾವಿರಾರು ಕೋಟಿ ರೂ. ಹಗರಣ ನಡೆಯುತ್ತಿರಲಿಲ್ಲ. ಮುಡಾದ ಬಹುತೇಕ ಸದಸ್ಯರು ರಿಯಲ್ ಎಸ್ಟೇಟ್ ಉದ್ಯಮಿಗಳಾಗಿರುವ ಹಿನ್ನೆಲೆಯಲ್ಲಿ ರೈತರು ಹಾಗೂ ನಿವೇಶನಾಕಾಂಕ್ಷಿಗಳು ವಂಚನೆಗೆ ಒಳಗಾಗುತ್ತಿದ್ದಾರೆ ಎಂದು ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಹಗರಣದಲ್ಲಿ ಆಡಳಿತ ಪಕ್ಷ, ಪ್ರತಿಪಕ್ಷದ ಪ್ರಭಾವಿ ಮುಖಂಡರುಗಳು ಭಾಗಿಯಾಗಿದ್ದಾರೆ. ಹಾಗಾಗಿ ಸರ್ಕಾರದ ಹಂತದಲ್ಲಿ ತನಿಖೆ ನಡೆದರೆ ಹಗರಣವನ್ನು ಬಯಲಿಗೆಳೆಯಲು ಸಾಧ್ಯವಿಲ್ಲದ ಹಿನ್ನೆಲೆಯಲ್ಲಿ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಮನವಿ ಪತ್ರದಲ್ಲಿ ಒತ್ತಾಯಿಸಿದ್ದಾರೆ.

ಈ ಸಂದರ್ಭ ಕನ್ನಡ ಚಳುವಳಿ ಸಂಘದ ರಾಜ್ಯಾಧ್ಯಕ್ಷ ಗುರುದೇವ್ ನಾರಾಯಣ್, ವಕೀಲ ಎಲ್. ರವಿಕುಮಾರ್, ರೈತ ಮುಖಂಡರಾದ ಅತ್ತಹಳ್ಳಿ ದೇವರಾಜ್, ಬರಡನಪುರ ನಾಗರಾಜ್, ಮಾರ್ಬಳ್ಳಿ ನೀಲಕಂಠಪ್ಪ, ಉಡಿಗಾಲ ರೇವಣ್ಣ, ತುಮಕೂರು ಶಿವಕುಮಾರ್, ಬಾಗೇಪಲ್ಲಿ ಗೋವಿಂದರೆಡ್ಡಿ, ಸುಂದ್ರಪ್ಪ ಇದ್ದರು

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net