ಮುಡಾ ಹಗರಣ : ಸಿಎಂ ಸಲ್ಲಿಸಿರುವ ಮೇಲ್ಮನವಿ ವಿಚಾರಣೆ ಸತತ 7ನೇ ಬಾರಿಗೆ ಮುಂದೂಡಿಕೆ

highcourt
Published on

ಬೆಂಗಳೂರು: ಮುಡಾ ಪ್ರಕರಣದ ತನಿಖೆಗೆ ರಾಜ್ಯಪಾಲರು ಅನುಮತಿಸಿರುವುದನ್ನು ನ್ಯಾಯಾಲಯ ಎತ್ತಿ ಹಿಡಿದಿದ್ದು, ಇದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿರುವ ಮೇಲ್ಮನವಿ ವಿಚಾರಣೆ ಸತತ 7ನೇ ಬಾರಿಗೆ ಮುಂದೂಡಿಕೆಯಾಗಿದೆ.

ಸಿದ್ದರಾಮಯ್ಯ ಮತ್ತು ಆಕ್ಷೇಪಾರ್ಹ ಭೂಮಿಯ ಮಾಲೀಕ ಜೆ.ದೇವರಾಜು ಸಲ್ಲಿಸಿರುವ ಮೇಲ್ಮನವಿಗಳ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಅನು ಶಿವರಾಮನ್ ಮತ್ತು ಕೆ.ರಾಜೇಶ್ ರೈ ಅವರ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಈ ವೇಳೆ ರಾಜ್ಯ ಸರ್ಕಾರದ ಪರ ಎಜಿ ಕೆ.ಶಶಿಕಿರಣ್ ಶೆಟ್ಟಿ ಹಾಜರಾಗಿ ಮೇಲ್ಮನವಿಗಳನ್ನು ಅಂತಿಮವಾಗಿ ವಿಚಾರಣೆ ನಡೆಸಬೇಕಿದೆ ಎಂದರು. ಆಗ ಪೀಠವು ಈ ಮೇಲ್ಮನವಿಗಳ ವಿಚಾರಣೆಯಂದು ಬೇರೆ ಅರ್ಜಿಗಳನ್ನು ಹೆಚ್ಚಾಗಿ ಪಟ್ಟಿ ಮಾಡುವುದಿಲ್ಲ.

ಹೀಗಾಗಿ, ನವೆಂಬರ್ ಮೊದಲ ವಾರದಲ್ಲಿ ವಿಚಾರಣೆ ನಡೆಸಬಹುದೇ ಎಂದರು. ಇದಕ್ಕೆ ಹಿರಿಯ ವಕೀಲ ಪ್ರೊ. ರವಿವರ್ಮ ಕುಮಾರ್ ನವೆಂಬರ್ ಎರಡನೇ ವಾರದಲ್ಲಿ ವಿಚಾರಣೆ ನಡೆಸುವಂತೆ ಕೋರಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net